ಬೆಳ್ಳಾರೆಯ ಮುಕ್ಕೂರು ನೇಸರ ಯುವಕ ಮಂಡಲ ಹತ್ತನೇ ವರ್ಷಾಚರಣೆ-ದಶಪ್ರಣತಿ ಪ್ರಯುಕ್ತ ಪ್ರಗತಿಪರ ಕೃಷಿಕ ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದ ಸಹಯೋಗದೊಂದಿಗೆ ಜ.4 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯ ತನಕ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರವು ಮೇಲಿನ ಮುಕ್ಕೂರು ಮೋಹನ ಬೈಪಾಡಿತ್ತಾಯ ಅವರ ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ಐಸಿಎಆರ್-ಡಿಸಿಆರ್ ಪುತ್ತೂರು ಇದರ ನಿವೃತ್ತ ಪ್ರಧಾನ ವಿಜ್ಞಾನಿ ಡಾ.ಎನ್ ಯದುಕುಮಾರ್, ವಿಟ್ಲ ಸಿಪಿಸಿಆರ್ ಐ ಹಿರಿಯ ವಿಜ್ಞಾನಿ ಡಾ.ನಾಗರಾಜ, ಪ್ರಗತಿಪರ ಕೃಷಿಕರಾದ ಸುರೇಶ್ ಬಲ್ನಾಡು, ಚಂದ್ರಶೇಖರ ತಾಳ್ತಜೆ, ಭ್ಲೂಮ್ ಬಯೋಟೆಕ್ ಸಂಸ್ಥಾಪಕ ಸುಹಾಸ್ ಮೋಹನ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಕೃಷಿಕ ಬಂಧುಗಳಿಗೆ ಉಪಹಾರ, ಊಟದ ವ್ಯವಸ್ಥೆ ಇರಲಿದೆ. ಕೃಷಿಕರಿಗೆ ಮುಕ್ತ ಪ್ರವೇಶವಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

