ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸಿದೆ. ಇಷ್ಟೊಂದು ದನಕರುಗಳು ಕಾಡಿಗೆ ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಎದುರಾಗಲಿದೆ. ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇದೆ ಎಂದು ತಿಳಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

