

ಅರಣ್ಯ ಹಕ್ಕು ಕಾಯಿದೆ -2006 ಅಡಿಯಲ್ಲಿ ಅರಣ್ಯವಾಸಿಗಳು ಮತ್ತು ಬುಡಕಟ್ಟು ಜನಾಂಗದವರಿಗೆ ಕಾಡಿನಲ್ಲಿ ತಮ್ಮ ಜಾನುವಾರುಗಳನ್ನು ಮೇಯಿಸಲು ಅವಕಾಶವಿದೆ ಎಂದು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.
ನೆರೆರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ದನಕರು ತಂದು ಮೇಯಿಸುವುದಕ್ಕೆ ಮಾತ್ರ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ವನ್ಯಜೀವಿಧಾಮದ ವ್ಯಾಪ್ತಿಯಲ್ಲಿ ಸುಮಾರು 33 ಸಾವಿರ ದನಕರುಗಳಿವೆ ಎಂದು ಪಶುಸಂಗೋಪನಾ ಇಲಾಖೆ ಅಂಕಿ ಅಂಶ ತಿಳಿಸಿದೆ. ಇಷ್ಟೊಂದು ದನಕರುಗಳು ಕಾಡಿಗೆ ಹೋಗುವುದರಿಂದ ವನ್ಯಜೀವಿಗಳಾದ ಆನೆ, ಕಾಡೆಮ್ಮೆ, ಕಾಡುಕೋಣ, ಜಿಂಕೆ, ಕಡವೆ ಇತ್ಯಾದಿಗಳಿಗೆ ಮೇವಿನ ಕೊರತೆ ಹಾಗೂ ನೀರಿನ ಕೊರತೆ ಎದುರಾಗಲಿದೆ. ಸಾಂಕ್ರಾಮಿಕ ಕಾಯಿಲೆಗಳು ವನ್ಯಜೀವಿಗಳಿಗೂ ಹಬ್ಬುವ ಅಪಾಯ ಇದೆ ಎಂದು ತಿಳಿಸಿದ್ದಾರೆ.
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಇನ್ನೂ 3…
ಶಾಲೆಯ ವಾರ್ಷಿಕೋತ್ಸವದಲ್ಲಿ ಕೃಷಿ ಸಾಧಕನಿಗೆ ಸನ್ಮಾನ. ಇಂತದೊಂದು ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿರುವುದು ಕುಕ್ಕೆ…
ಮಂಗಳವಾರದಂದು ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಹಿಂಗಾರು ಹಂಗಾಮಿನ ಬೆಳೆಗಳಿಗಾಗಿ ಒಟ್ಟು 37,952…
ಮಹಿಳೆಯರ ಜೀವನದಲ್ಲಿ ಆರ್ಥಿಕ ಬದಲಾವಣೆ ತರಲು ಹಾಗೂ ಸ್ವಾವಲಂಬನೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸಂಬರಗಿ ಗ್ರಾಮದ ಅಶೋಕ ಮಾಸಾಳ ಅವರು ಜಮೀನಿನಲ್ಲಿ…
ಡ್ರ್ಯಾಗನ್ ಪ್ರೂಟ್ ಕೃಷಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳುವ ರೈತರನ್ನು ಬೆಂಬಲಿಸುವ ಪ್ರಯತ್ನದಲ್ಲಿ ಹೆಸರಘಟ್ಟದಲ್ಲಿರುವ…