ಹಠ ಬಿಡದ ಕೆ ಎಸ್‌ ಈಶ್ವರಪ್ಪ | ಬಂಡಾಯವೆದ್ದ ಈಶ್ವರಪ್ಪ ಅವರನ್ನು ಉಚ್ಚಾಟಿಸಿದ ಬಿಜೆಪಿ |

April 22, 2024
10:47 PM

ಶಿವಮೊಗ್ಗದಲ್ಲಿ (Shivamogga) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ ಅವರನ್ನು ಬಿಜೆಪಿಯು (BJP) ಪಕ್ಷದಿಂದ ಉಚ್ಚಾಟನೆ ಮಾಡಿದೆ.

Advertisement

K S ಈಶ್ವರಪ್ಪ(K S Eshwarappa) ಮತ್ತು ಯಡಿಯೂರಪ್ಪ(B S Yadyurappa)ನವರ ನಡುವೆ ಭಿನ್ನಮತ, ಕೋಪತಾಪ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ ಅದೆಷ್ಟೋ ಬಾರಿ ಮುನುಸಿಕೊಂಡಿದ್ದುಂಟು, ಒಂದಾಗಿದ್ದುಂಟು. ಯಾಕೆಂದರೆ, ಇವರಿಬ್ಬರ ನಡುವೆ ಮನಸ್ತಾಪ ಎದುರಾದಾಗ ಸಂಘ ಪರಿವಾರದ(RSS) ನಾಯಕರು ಮಧ್ಯಸ್ಥಿಕೆ ವಹಿಸಿ ಸರಿ ಮಾಡಿದ ಉದಾಹರಣೆಗಳೂ ಇವೆ. ಮಕ್ಕಳು ತನ್ನ ತಾಯಿಯ ಮೇಲೆ ಸಿಟ್ಟಾದರೆ ಅದೆಷ್ಟು ದಿನ? ಹಾಗೆಯೇ ಈಶ್ವರಪ್ಪನವರು ಇಂದಲ್ಲಾ ನಾಳೆ ಕೋಪ ಬಿಟ್ಟು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆಯಬಹುದು ಎಂದೇ ವ್ಯಾಖ್ಯಾನಿಸಲಾಗಿತ್ತು. ಆದರೆ ಹಾಗಾಗಲಿಲ್ಲ.

ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ನಾಮಪತ್ರ ಹಿಂದಕ್ಕೆ ಪಡೆಯುವಂತೆ ಬಿಜೆಪಿ ನಾಯಕರು ಈಶ್ವರಪ್ಪ ಅವರನ್ನು ಮನ ಒಲಿಸುವ ಪ್ರಯತ್ನ ಮಾಡಿದ್ದರು. ಆದರೆ ಈಶ್ವರಪ್ಪ ಕಣದಿಂದ ಹಿಂದಕ್ಕೆ ಸರಿಲಿಲ್ಲ. ಇಂದು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿತ್ತು. ಇಂದು ನಾಮಪತ್ರವನ್ನು ಹಿಂದಕ್ಕೆ ಪಡೆಯದ ಕಾರಣ ಬಿಜೆಪಿ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಮೋದಿ ಅಲ್ಲ ಬ್ರಹ್ಮ ಬಂದರೂ ಚುನಾವಣೆಯಲ್ಲಿಸ್ಪರ್ಧೆ ಮಾಡುವುದು ಖಚಿತ ಎಂದು ನಾಮಪತ್ರ ಹಿಂದೆ ಪಡೆಯದ ಈಶ್ವರಪ್ಪ.

ಕೆಎಸ್‌ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್‌ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.

  • ಅಂತರ್ಜಾಲ ಮಾಹಿತಿ

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹೆಚ್ಚುತ್ತಿರುವ ತಾಪಮಾನ | 2030 ರ ವೇಳೆಗೆ ಭಾರತದಲ್ಲಿ ಶೇ.5 ರಷ್ಟು ಉತ್ಪಾದನೆ ಕುಸಿತ
April 2, 2025
11:46 PM
by: The Rural Mirror ಸುದ್ದಿಜಾಲ
ರೈತರ ಹಿತಾಸಕ್ತಿ ರಕ್ಷಿಸಲು ಪಿಎಂ-ಕಿಸಾನ್ | ರೈತರಿಗೆ ನಿಖರ ಹವಾಮಾನ ಮುನ್ಸೂಚನೆಗೂ ಕ್ರಮ |
April 2, 2025
9:31 PM
by: The Rural Mirror ಸುದ್ದಿಜಾಲ
ದೇಶದಲ್ಲಿ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ…!
April 2, 2025
8:51 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group