ಶಿವಮೊಗ್ಗದಲ್ಲಿ (Shivamogga) ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಈಶ್ವರಪ್ಪ ಅವರನ್ನು ಬಿಜೆಪಿಯು (BJP) ಪಕ್ಷದಿಂದ ಉಚ್ಚಾಟನೆ ಮಾಡಿದೆ.
K S ಈಶ್ವರಪ್ಪ(K S Eshwarappa) ಮತ್ತು ಯಡಿಯೂರಪ್ಪ(B S Yadyurappa)ನವರ ನಡುವೆ ಭಿನ್ನಮತ, ಕೋಪತಾಪ ಇಂದು ನಿನ್ನೆಯದಲ್ಲ. ಇಬ್ಬರು ನಾಯಕರು ತಮ್ಮ ರಾಜಕೀಯ ವೃತ್ತಿ ಜೀವನದಲ್ಲಿ ಅದೆಷ್ಟೋ ಬಾರಿ ಮುನುಸಿಕೊಂಡಿದ್ದುಂಟು, ಒಂದಾಗಿದ್ದುಂಟು. ಯಾಕೆಂದರೆ, ಇವರಿಬ್ಬರ ನಡುವೆ ಮನಸ್ತಾಪ ಎದುರಾದಾಗ ಸಂಘ ಪರಿವಾರದ(RSS) ನಾಯಕರು ಮಧ್ಯಸ್ಥಿಕೆ ವಹಿಸಿ ಸರಿ ಮಾಡಿದ ಉದಾಹರಣೆಗಳೂ ಇವೆ. ಮಕ್ಕಳು ತನ್ನ ತಾಯಿಯ ಮೇಲೆ ಸಿಟ್ಟಾದರೆ ಅದೆಷ್ಟು ದಿನ? ಹಾಗೆಯೇ ಈಶ್ವರಪ್ಪನವರು ಇಂದಲ್ಲಾ ನಾಳೆ ಕೋಪ ಬಿಟ್ಟು ತಮ್ಮ ನಾಮಪತ್ರವನ್ನು ಹಿಂದಕ್ಕೆ ಪಡೆಯಬಹುದು ಎಂದೇ ವ್ಯಾಖ್ಯಾನಿಸಲಾಗಿತ್ತು. ಆದರೆ ಹಾಗಾಗಲಿಲ್ಲ.
ಪಕ್ಷದ ಸೂಚನೆಯನ್ನು ಧಿಕ್ಕರಿಸಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷಕ್ಕೆ ಮುಜುಗರ ತಂದಿದ್ದೀರಿ. ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ 6 ವರ್ಷ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಕೆಎಸ್ ಈಶ್ವರಪ್ಪ ಅವರನ್ನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಹಿಂದಕ್ಕೆ ಸರಿಸುವ ನಿಟ್ಟಿನಲ್ಲಿ ಸಾಕಷ್ಟು ಸಭೆಗಳು ನಡೆದವು. ಹಿರಿಯ ಮುಖಂಡರು ಮಾತನಾಡಿದರು. ಆದರೂ, ಈಶ್ವರಪ್ಪ ಚುನಾವಣೆ ಸ್ಪರ್ಧೆ ಮಾಡುತ್ತೇನೆ ಎಂದು ಪಣತೊಟ್ಟರು. ಕರ್ನಾಟಕದಲ್ಲಿ ನಡೆಯುವ 2 ನೇ ಹಂತದ ಚುನಾವಣೆಯ ನಾಮಪತ್ರ ಹಿಂಪಡೆಯುವ ದಿನಾಂಕ ಏಪ್ರಿಲ್ 22 ಆಗಿತ್ತು. ಆದರೆ, ಈಶ್ವರಪ್ಪ ನಾಮಪತ್ರ ಹಿಂಪಡೆಯದ ಹಿನ್ನೆಲೆ ಪಕ್ಷದಿಂದ ಹೊರ ಹಾಕಲಾಗಿದೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…