ಟವರ್‌ ಏರಿ ಆತ್ಮಹತ್ಯೆಗೆ ಯತ್ನ | ಜನರ ಬುದ್ದಿವಾದಕ್ಕೆ ಶರಣಾಗಿ ಕೆಳಗಿಳಿಯುವ ಯತ್ನ | ಕೊನೆಗೂ ಆಯತಪ್ಪಿ ಬಿದ್ದು ಮೃತಪಟ್ಟ…! |

October 13, 2022
2:14 PM

ಬೆಳಗಾವಿ  ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.

ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು  ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ  ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್​ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |
March 17, 2025
8:07 AM
by: The Rural Mirror ಸುದ್ದಿಜಾಲ
ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!
March 17, 2025
7:02 AM
by: The Rural Mirror ಸುದ್ದಿಜಾಲ
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್
March 17, 2025
6:42 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ
March 17, 2025
6:36 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror