ಬೆಳಗಾವಿ ಜಿಲ್ಲೆಯ ಮಂಗವಾತಿ ಗ್ರಾಮದಲ್ಲಿ ಸಾಲಭಾದೆ ತಾಳಲಾರದೇ ವ್ಯಕ್ತಿಯೊಬ್ಬ ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ್ದ. ಈ ಸಂದರ್ಭ ಜನರು ಬುದ್ದಿವಾದ ಹೇಳಿದ್ದರು, ಇದಕ್ಕೆ ಗೌರವಿಸಿ ಆತ್ಮಹತ್ಯೆ ನಿರ್ಧಾರ ಕೈಬಿಟ್ಟು ಟವರಿನಿಂದ ಇಳಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ.
ಮಂಗವಾತಿ ಗ್ರಾಮದ ನಿವಾಸಿ ಸಂಜಯ್ ಕಲಗೌಡ ಪಾಟೀಲ್(35) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೃತ ವ್ಯಕ್ತಿ ಖಾಸಗಿ ಹಾಗೂ ಬ್ಯಾಂಕ್ ಗಳು ಸೇರಿದಂತೆ ಹಲವಾರು ಸಾಲ ಮಾಡಿಕೊಂಡಿದ್ದು, ಸಾಲಗಾರರ ಕಾಟ ತಾಳಲಾರದೇ ಆತ್ಮಹತ್ಯೆಗೆ ಶರಣಾಗಲು ಮೊಬೈಲ್ ಟವರ್ ಏರಿದ್ದಾನೆ. ಈ ವೇಳೆಗೆ ಸ್ಥಳೀಯರು ಬುದ್ದಿ ಮಾತು ಹೇಳಿದ್ದಾರೆ. ಸಾಯುವುದು ಪರಿಹಾರವಲ್ಲ ಎಂದು ಬುದ್ದಿವಾದ ಹೇಳಿದ್ದಾರೆ. ಹೀಗಾಗಿ ಈ ಮಾತುಗಳಿಂದ ಜ್ಞಾನೋದಯವಾಗಿ ಸಾಯುವ ನಿರ್ಧಾರದಿಂದ ಹೊರಬಂದ. ಹೀಗಾಗಿ ಟವರ್ನಿಂದ ಕೆಳಗೆ ಇಳಿಯುವಾಗ ಆಯತಪ್ಪಿ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಗ್ರಾಮಸ್ಥರು ಆಸ್ಪತ್ರೆಗೆ ಕರೆದೊಯ್ದರೂ, ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಾಗವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…