ಪಾಕಿಸ್ತಾನದ ಪೇಶಾವರದ ಖ್ವಾನಿ ಬಜಾರ್ ಪ್ರದೇಶದ ಮಸೀದಿಯೊಂದರಲ್ಲಿ ಭೀಕರ ಬಾಂಬ್ ಸ್ಫೋಟವಾಗಿದ್ದು, 46 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು, 50 ಕ್ಕೂ ಹೆಚ್ಚು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಿದ್ದೇವೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರುಮ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ರಾಜಧಾನಿ ಇಸ್ಲಾಮಾಬಾದ್‌ನ ಪಶ್ಚಿಮಕ್ಕೆ ಸುಮಾರು 190 ಕಿಲೋಮೀಟರ್ ದೂರದ ಪೇಶಾವರದ ಪ್ರದೇಶದಲ್ಲಿ ಸ್ಫೋಟ ನಡೆದಿದೆ. ಇಬ್ಬರು ದಾಳಿಕೋರರು ಮಸೀದಿ ಪ್ರವೇಶಕ್ಕೆ ಯತ್ನಿಸಿದರು. ಅವರನ್ನು ತಡೆಯಲು ಹೋದಾಗ ದಾಳಿಕೋರರು ಮಸೀದಿ ಕಾಯುತ್ತಿದ್ದ ಗಾರ್ಡ್ಗೆ ಗುಂಡಿಕ್ಕಿದ್ದಾರೆ. ಇದರಿಂದ ಗುಂಡಿನ ದಾಳಿಗೆ ಓರ್ವ ಗಾರ್ಡ್ ಪೊಲೀಸ್ ಬಲಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸ್ಫೋಟದ ಬಗ್ಗೆ ಯಾವುದೇ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಸ್ಫೋಟದ ಹೊಣೆಯನ್ನು ತಕ್ಷಣವೇ ಯಾವುದೇ ಗುಂಪು ಹೊತ್ತುಕೊಂಡಿಲ್ಲ ಎಂದೂ ಅಧಿಕಾರಿಗಳು ಹೇಳಿದ್ದಾರೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…