ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ ₹ 8, ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ₹ 6 ರಷ್ಟು ಕಡಿತಗೊಳಿಸಿದೆ. ಇದು ಪೆಟ್ರೋಲ್ ಬೆಲೆಯನ್ನು ಪ್ರತೀ ಲೀಟರ್ ಗೆ 9.5 ರೂ ಹಾಗೂ ಡೀಸೆಲ್ ಬೆಲೆಯನ್ನು ಪ್ರತೀ ಲೀಟರ್ ಗೆ 7 ರೂ ಗಳಷ್ಟು ಕಡಿಮೆ ಮಾಡುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಈ ವರ್ಷ, ನಾವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 9 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಪ್ರತಿ ಅನಿಲ ಸಿಲಿಂಡರ್ ಗೆ (12 ಸಿಲಿಂಡರ್ಗಳವರೆಗೆ) 200 ರೂ.ಗಳ ಸಬ್ಸಿಡಿಯನ್ನು ನೀಡುತ್ತೇವೆ ಎಂದು ಹಣಕಾಸು ಸಚಿವರು ಘೋಷಿಸಿದರು.
ಹೆಚ್ಚಿನ ಆಮದು ಅವಲಂಬನೆಯನ್ನು ಹೊಂದಿರುವ ಪ್ಲಾಸ್ಟಿಕ್ ಉತ್ಪನ್ನಗಳ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ ಸುಂಕವನ್ನು ಕಡಿತಗೊಳಿಸುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ‘ನಮ್ಮ ಆಮದು ಅವಲಂಬನೆ ಹೆಚ್ಚಿರುವ ಪ್ಲಾಸ್ಟಿಕ್ ಉತ್ಪನ್ನಗಳಿಗೆ ಕಚ್ಚಾ ವಸ್ತುಗಳು ಮತ್ತು ಮಧ್ಯವರ್ತಿಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಸಹ ನಾವು ಕಡಿಮೆ ಮಾಡುತ್ತಿದ್ದೇವೆ. ಉಕ್ಕಿನ ಕೆಲವು ಕಚ್ಚಾ ವಸ್ತುಗಳ ಮೇಲಿನ ಆಮದು ಸುಂಕವನ್ನು ಕಡಿಮೆ ಮಾಡಲಾಗುತ್ತದೆ. ಕೆಲವು ಉಕ್ಕಿನ ಉತ್ಪನ್ನಗಳ ಮೇಲೆ ರಫ್ತು ಸುಂಕವನ್ನು ವಿಧಿಸಲಾಗುವುದು’ ಎಂದು ಅವರು ಹೇಳಿದರು.1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…