ಕೇಂದ್ರ ಸರಕಾರ ಡೀಸಲ್ ಮೇಲೆ ಅಬಕಾರಿ ಸುಂಕವನ್ನು 10 ರೂ ಹಾಗೂ ಪೆಟ್ರೋಲ್ ಮೇಲೆ 5 ರೂ ಕಡಿಮೆಗೊಳಿಸಿತ್ತು. ಇದೀಗ ರಾಜ್ಯ ಸರಕಾರ ಕೂಡಾ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ.
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಕಡಿತಗೊಳಿಸಿದ ಕೇಂದ್ರ ಸರ್ಕಾರ ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ ಎಂದು ತಿಳಿಸಿತ್ತು. ಅದರ ಜೊತೆಗೆ ಗ್ರಾಹಕರ ಹೊರೆಯನ್ನು ಇನ್ನಷ್ಟು ಕಡಿಮೆ ಮಾಡಲು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮನವಿ ಮಾಡಿತ್ತು. ಅದರ ಬೆನ್ನಲ್ಲೇ ವಿವಿಧ ರಾಜ್ಯಗಳು ತೆರಿಗೆ ಇಳಿಕೆ ಮಾಡಿದ್ದವು.
ಕರ್ನಾಟಕ ರಾಜ್ಯ ಸರ್ಕಾರವು ಕೂಡಾ ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.
ನಾಳೆ ಸಂಜೆಯಿಂದ ಈ ದರ ಜಾರಿಯಾಗಲಿದೆ. ಕೇಂದ್ರ ಸರ್ಕಾರವು ಡೀಸಲ್ 10 ರೂ. ಹಾಗೂ ಪೆಟ್ರೋಲ್ 05 ರೂ. ಕಡಿಮೆಗೊಳಿಸಿದ್ದು ಸ್ವಾಗತಾರ್ಹ. ಜನರಿಗೆ ದೀಪಾವಳಿಯ ಉಡಗೊರೆ ನೀಡಿದ ಪ್ರಧಾನಿಗಳಿಗೆ ಮುಖ್ಯಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ರಾಜ್ಯಸರ್ಕಾರವು ಡೀಸೆಲ್ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ. ಕಡಿಮೆಗೊಳಿಸಲು ನಿರ್ಧರಿಸಿದೆ. (2/3)
— CM of Karnataka (@CMofKarnataka) November 3, 2021
ಈ ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.ರಾಜ್ಯ ಸರಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel