ತೈಲ ಬೆಲೆ ಏರಿಕೆಯ ಹಾದಿಯಲ್ಲಿಯೇ ಇದೆ. ಹೀಗಾಗಿ ಎಲ್ಲೆಡೆಯೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯದ್ದೇ ಸುದ್ದಿ. ಈ ನಡುವೆಯೇ ಪೆಟ್ರೋಲ್ ಹಾಗೂ ಡೀಸೆಲ್ ಬಳಕೆಯೂ ಹೆಚ್ಚಾಗಿದೆ…!. ಸರ್ಕಾರಿ ದಾಖಲೆಗಳು ಈ ಮಾಹಿತಿ ನೀಡುತ್ತವೆ.
ಸರ್ಕಾರಿ ಮಾಹಿತಿ ಪ್ರಕಾರ ಕಳೆದ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಪೆಟ್ರೋಲ್ ಬಳಕೆ ಶೇಕಡಾ 14 ರಷ್ಟು ಹೆಚ್ಚಾಗಿದೆ, ಡೀಸೆಲ್ ಬಳಕೆ ಶೇಕಡಾ 2 ರಷ್ಟು ಹೆಚ್ಚಾಗಿದೆ. ಜಾಗತಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ತಕ್ಷಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಕಡಿಮೆಯಾಗಲಿವೆ ಎಂದೂ ಸರ್ಕಾರಿ ಮಾಹಿತಿ ಹೇಳುತ್ತದೆ.
ಮಾರ್ಚ್ 22 ರಿಂದ ಏಪ್ರಿಲ್ 6 ರ ನಡುವೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು 14 ಬಾರಿ ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 105.41 ರೂ ಆಗಿದ್ದರೆ ಡೀಸೆಲ್ ಬೆಲೆ 96.67 ರೂ. ಆಗಿದೆ. ಈಚೆಗೆ ಭಾರತವು ಜೈವಿಕ ಇಂಧನ ಮಿಶ್ರಣವನ್ನು ವೇಗಗೊಳಿಸಿದೆ ಮತ್ತು ಏಪ್ರಿಲ್ 1, 2023 ರ ಹೊತ್ತಿಗೆ ದೇಶವು ಎಲ್ಲಾ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಜೈವಿಕ ಇಂಧನ ಮಿಶ್ರಿತವಾದ ಇಂಧನವನ್ನು ಹೊಂದಿರುತ್ತದೆ ಎಂಬುದು ಈಗಿನ ಲೆಕ್ಕಾಚಾರ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…