ರಾಜ್ಯದಲ್ಲೂ ಪೆಟ್ರೋಲ್‌, ಡೀಸೆಲ್‌ ಮೇಲಿನ ಸುಂಕ ಕಡಿತ | ಇನ್ನು ಪೆಟ್ರೋಲ್‌ , ಡೀಸೆಲ್‌ ಬೆಲೆ ಎರಡಂಕಿ…! |

November 4, 2021
12:12 AM
ಕೇಂದ್ರ ಸರಕಾರ ಡೀಸಲ್ ಮೇಲೆ ಅಬಕಾರಿ ಸುಂಕವನ್ನು 10 ರೂ ಹಾಗೂ ಪೆಟ್ರೋಲ್ ಮೇಲೆ  5 ರೂ ಕಡಿಮೆಗೊಳಿಸಿತ್ತು. ಇದೀಗ ರಾಜ್ಯ ಸರಕಾರ ಕೂಡಾ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಹೀಗಾಗಿ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌.‌
ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ. ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ 10 ರೂ. ಕಡಿತಗೊಳಿಸಿದ ಕೇಂದ್ರ ಸರ್ಕಾರ  ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಅನ್ವಯವಾಗಲಿದೆ ಎಂದು ತಿಳಿಸಿತ್ತು. ಅದರ ಜೊತೆಗೆ ಗ್ರಾಹಕರ ಹೊರೆಯನ್ನು ಇನ್ನಷ್ಟು ಕಡಿಮೆ ಮಾಡಲು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿಮೆ ಮಾಡುವಂತೆ ಕೇಂದ್ರ ಸರ್ಕಾರವು ರಾಜ್ಯಗಳಿಗೆ ಮನವಿ ಮಾಡಿತ್ತು. ಅದರ ಬೆನ್ನಲ್ಲೇ ವಿವಿಧ ರಾಜ್ಯಗಳು ತೆರಿಗೆ ಇಳಿಕೆ ಮಾಡಿದ್ದವು. 
ಕರ್ನಾಟಕ ರಾಜ್ಯ ಸರ್ಕಾರವು ಕೂಡಾ ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ಧರಿಸಿದೆ.

ಈ  ನಿರ್ಧಾರದಿಂದ ರಾಜ್ಯ ಸರ್ಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.ರಾಜ್ಯ ಸರಕಾರದ ಈ ನಿರ್ಧಾರ ನಾಳೆ ಸಾಯಂಕಾಲದಿಂದ ಅನ್ವಯವಾಗುವುದು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯೊಂದನ್ನೇ ನಂಬಬೇಡಿ, ಮಿಶ್ರ ಬೆಳೆ ಪದ್ಧತಿಗೆ ಆದ್ಯತೆ ನೀಡಿ – ಕ್ಯಾಂಪ್ಕೊ ಅಧ್ಯಕ್ಷ ಎಸ್‌.ಆರ್‌. ಸತೀಶ್ಚಂದ್ರ
October 27, 2026
12:50 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-10-2026 | ಮತ್ತೊಂದು ವಾಯುಭಾರ ಕುಸಿತದ ಸಾಧ್ಯತೆ..?
October 27, 2026
12:19 PM
by: ಸಾಯಿಶೇಖರ್ ಕರಿಕಳ
ಅಡಿಕೆ ಬೆಳೆ ವಿಸ್ತರಣೆಗೆ ವೈಜ್ಞಾನಿಕ ನಿಯಂತ್ರಣ ಅಗತ್ಯ – ಸಮಗ್ರ ಕೃಷಿ ನೀತಿ ಅನಿವಾರ್ಯ
October 27, 2026
7:02 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ಬೆಲೆ ನಿಗದಿ – ರೈತರ ಬೇಡಿಕೆಗಳತ್ತ ಸರ್ಕಾರದ ಗಮನ
October 27, 2026
6:23 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror