ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) 5 ವರ್ಷಗಳ ಕಾಲ ನಿಷೇಧ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ದೇಶದ ಎಲ್ಲಾ ರಾಜ್ಯಗಳಲ್ಲೂ ಪೊಲೀಸರು ಕಟ್ಟೆಟ್ಟರ ವಹಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿಭದ್ರತೆ ಕೈಗೊಂಡಿದ್ದಾರೆ. ಪಿಎಫ್‌ಐ ಹೆಚ್ಚಿನ ಕಾರ್ಯಕರ್ತರಿರುವ ಪ್ರದೇಶಗಳಲ್ಲಿ ಪೊಲೀಸ್ ಎಚ್ಚರಿಕೆ ವಹಿಸಲಾಗಿದೆ.
ಬೆಂಗಳೂರು ನಗರದ ಡಿಜೆಹಳ್ಳಿ, ಕೆಜೆಹಳ್ಳಿ ಟ್ಯಾನರಿ ರಸ್ತೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಶಿವಾಜಿನಗರದಲ್ಲೂ ಪೊಲೀಸರಿಂದ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆ, ಶಿವಮೊಗ್ಗೆ, ಉತ್ತರ ಕನ್ನಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ನಿಗಾ ವಹಿಸುವಂತೆ ಪೊಲೀಸರಿಗೆ ಖಡಕ್ ಆದೇಶ ನೀಡಲಾಗಿದೆ. .
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel