ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ ವತಿಯಿಂದ “ಟೆರರ್” ತರಬೇತಿ…! | ಸ್ಪೋಟಕ ಮಾಹಿತಿ ಕಲೆ ಹಾಕಿದ್ದ ಎನ್ಐಎ ಅಧಿಕಾರಿಗಳು..! |

September 30, 2022
3:41 PM

ದೇಶದಾದ್ಯಂತ ಪಿಎಫ್‌ಐ ನಿಷೇಧ ಮಾಡಲಾಗಿದೆ. ಹೀಗೆ ನಿಷೇಧ ಮಾಡುವ ಮುನ್ನ ಎನ್‌ ಐ ಎ ಅಧಿಕಾರಿಗಳು ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಿರುವ ಹಾಗೂ ಈಗಲೂ ಮಾಹಿತಿ ಸಂಗ್ರಹಿಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕರಿಗೆ ಪಿಎಫ್‌ಐ “ಟೆರರ್” ಟ್ರೈನಿಂಗ್ ನೀಡಲಾಗುತ್ತಿತ್ತು ಎಂಬ ಮಾಹಿತಿ ತಿಳಿದುಬಂದಿದೆ.

ಬಂಟ್ವಾಳ, ಪುತ್ತೂರು, ಸುಳ್ಯದ ಕೆಲ ಅಜ್ಞಾತ ಪ್ರದೇಶಗಳಲ್ಲಿ ಟ್ರೈನಿಂಗ್ ಕೊಡಲಾಗುತ್ತಿತ್ತು. ಇದಕ್ಕೆ ಪೂರಕವಾಗಿ ನಿಷೇಧಿತ ಸೆಟಲೈಟ್‌ ಫೋನು ಕಾರ್ಯಾಚರಿಸುತ್ತಿರುವ ಬಗ್ಗೆ ಈ ಹಿಂದೆಯೇ ಹಲವು ಬಾರಿ ಪೊಲೀಸರು ಎಚ್ಚರಿಸಿದ್ದರು.ಈ ಬಗ್ಗೆ ತನಿಖೆಯನ್ನೂ ನಡೆಸುತ್ತಿದ್ದರು.  ಬಂಟ್ವಾಳ ತಾಲೂಕಿನ ಮಿತ್ತೂರಿನಲ್ಲಿರುವ ಫ್ರೀಡಂ ಕಮ್ಯುನಿಟಿ ಹಾಲ್ ಬಗ್ಗೆಯೂ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು 2007 ರಿಂದಲೇ ತರಬೇತಿ ಆರಂಭವಾಗಿದ್ದು ಈವರೆಗೂ ಸಾವಿರಾರು ಯುವಕರಿಗೆ ಟ್ರೈನಿಂಗ್ ನೀಡಿದ್ದಾರೆ ಎನ್ನುವುದು  ಸದ್ಯದ ಮಾಹಿತಿ. ಈ ಬಗ್ಗೆ ಆಯೂಬ್ ಅಗ್ನಾಡಿ ಎಂಬ ಟ್ರಸ್ಟಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ
ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ
September 12, 2026
7:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror