ಬಾಳಿಲ ವಿದ್ಯಾಬೋಧಿನೀ ಎಜುಕೇಶನಲ್ ಸೊಸೈಟಿಯ ಆಡಳಿತ ಮಂಡಳಿಯ ಆಡಳಿತ ಸಭೆ ಅಧ್ಯಕ್ಷ ಎನ್ ವೆಂಕಟ್ರಮಣ ಭಟ್ ರವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಎಂ ಸುಬ್ರಹ್ಮಣ್ಯ ಮುಂಡುಗಾರು, ಕಾರ್ಯದರ್ಶಿಯಾಗಿ ಪಿ ಜಿ ಎಸ್ ಎನ್ ಪ್ರಸಾದ್, ಉಪಕಾರ್ಯದರ್ಶಿಯಾಗಿ ಭಾರತೀಶಂಕರ ಆದಾಳ ಹಾಗೂ ಕೋಶಾಧಿಕಾರಿಯಾಗಿ ರಾಧಾಕೃಷ್ಣ ರಾವ್ ಯು ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ವಿದ್ಯಾಬೋಧಿನೀ ವಿದ್ಯಾ ಸಂಸ್ಥೆಗಳ ನೂತನ ಸಂಚಾಲಕರಾಗಿ ಕಾರ್ಯದರ್ಶಿ ಪಿ ಜಿ ಎಸ್ ಎನ್ ಪ್ರಸಾದ್ ರವರನ್ನು ನಿಯುಕ್ತಿಗೊಳಿಸಲಾಯಿತು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel