ಸಂತ ಫಿಲೋಮಿನಾ ಕಾಲೇಜಿನ ಪ್ಲೇಸ್ಮೆಂಟ್ ಮತ್ತುಆಂತರಿಕ ಗುಣಮಟ್ಟ ಭರವಸೆ ಕೋಶಗಳ ಸಂಯುಕ್ತ ಆಶ್ರಯದಲ್ಲಿ ಯುನೈಟೆಡ್ ಸ್ಟೇಟ್ಸ್ ಮೂಲದ ಬಹುರಾಷ್ಟ್ರೀಯ ಹೆಲ್ತ್ ಕೇರ್ ಮತ್ತುಇನ್ಶೂರೆನ್ಸ್ ಕಂಪನಿ ಓಪ್ಟ್ ಮೆಡಿಕಲ್ ಕೋಡರ್ ಹುದ್ದೆಗಳಿಗಾಗಿ ಹುದ್ದೆಗಳಿಗಾಗಿ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮುಖಾಂತರ ಆಯ್ಕೆಯಾದ 42 ಅಭ್ಯರ್ಥಿಗಳಿಗೆ ಐದು ವಾರಗಳ ಕಡ್ಡಾಯ ತರಬೇತಿ ಕಾರ್ಯಕ್ರಮವನ್ನು ಸಂತ ಫಿಲೋಮಿನಾ ಕಾಲೇಜಿನಲ್ಲಿಆಯೋಜಿಸಲಾಗಿತ್ತು.
ಕಂಪನಿ ಯವತಿಯಿಂದ ತರಬೇತಿಯ ಜೊತೆಗೆ ಮಾಕ್ ಟೆಸ್ಟ್, ಮಾಕ್ ಸಂದರ್ಶನ ಮುಂತಾದ ಪ್ರಕ್ರಿಯೆಗಳನ್ನು ಏರ್ಪಡಿಸಿ ಅಭ್ಯರ್ಥಿಗಳ ಕಲಿಕಾ ಪ್ರಗತಿಯನ್ನು ಅವಲೋಕನ ನಡೆಸಲಾಗಿತ್ತು. ಈ ಕಡ್ಡಾಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಂಗಣದಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ವಂ| ಡಾ| ಆಂಟೊನಿ ಪ್ರಕಾಶ್ ಮೊಂತೆರೋ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಓಪ್ಟಂ ಕಂಪನಿಯ ತರಬೇತುದಾರರಾದ ನಿಶಾ ಮಾಹಿತಿ ನೀಡಿದರು.
ಕಾಲೇಜಿನ ಪ್ಲೇಸ್ಮೆಂಟ್ ಅಧಿಕಾರಿ ಡಾ| ರಾಧಾಕೃಷ್ಣಗೌಡ ಸ್ವಾಗತಿಸಿದರು. ಧನ್ಯ ವಂದಿಸಿದರು. ಜೋನ್ಸನ್ ಡೇವಿಡ್ ಸಿಕ್ವೆರಾ ಕಾರ್ಯಕ್ರಮ ನಿರೂಪಿಸಿದರು. ಓಪ್ಟಮ್ ಕಂಪನಿಯ ತರಬೇತುದಾರರಾದ ಲತಾ ವೇದಿಕೆಯಲ್ಲಿಉಪಸ್ಥಿತರಿದ್ದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…