ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ಜೊತೆಗೆ ಮಹಿಳೆಯೊಬ್ಬರ ಫೋಟೋ ವೈರಲ್ ಆಗುತ್ತಿದ್ದಂತೆಯೇ ಮಹಿಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಾಸಕರಿಗೂ ನನಗೂ ಸಂಪರ್ಕವೇ ಇಲ್ಲ, ಉದ್ದೇಶಪೂರ್ವಕವಾಗಿ ಈ ರೀತಿ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಚುನಾವಣೆಯ ಸಮಯದಲ್ಲಿ ಪುತ್ತೂರು ಶಾಸಕರ ಈ ಪೋಟೋ ವೈರಲ್ ಆಗಿರುವುದು ಬಿಜೆಪಿಗೂ ಮುಜುಗರವಾಗಿದೆ.ಉದ್ದೇಶಪೂರ್ವಕವಾಗಿ ವಿಡಿಯೋ ಮತ್ತು ಫೋಟೊಗಳನ್ನು ಹರಿಯಬಿಡಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆಯೂ ಆಗುತ್ತಿದೆ. ಈ ನಡುವೆ ಪುತ್ತೂರು ಶಾಸಕರು ಕೂಡಾ ದೂರು ನೀಡಿದ್ದಾರೆ.
ಫೋಟೋವನ್ನು ಯಾರೋ ಎಡಿಟ್ ಮಾಡಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆಂದು ಮಹಿಳೆ ದೂರಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೂ ಸ್ಪಷ್ಟನೆ ನೀಡಿದ್ದಾರೆ. ಶಾಸಕರನ್ನು ಭೇಟಿ ಮಾಡುವ ಪ್ರಸಂಗ ಈ ಹಿಂದೆ ಬಂದಿರಲೇ ಇಲ್ಲ. ನನ್ನ ಫೋಟೋಗಳನ್ನು ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದಾರೆ. ಅದಕ್ಕೆ ನಾನು ಹೆದರುವ ಪ್ರಶ್ನೆಯೇ ಇಲ್ಲ. ಯಾಕಂದರೆ ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಫೋಟೋಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ಈ ರೀತಿ ಎಡಿಟ್ ಮಾಡಿ ಓರ್ವ ಮಹಿಳೆ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಆರೋಪ ಮಾಡುವುದು ಸರಿ ಅಲ್ಲ ಎಂದು ಅವರು ಹೇಳಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…