ನ.17-18 | ಪಿಲಿಕುಳದಲ್ಲಿ ‘ಪಿಲಿಕುಳ ಕಂಬಳ’

November 2, 2024
6:54 PM

ಮಂಗಳೂರು ಹೊರವಲಯದ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಈ ವರ್ಷದಿಂದ ಸರ್ಕಾರಿ ಪ್ರಾಯೋಜಿತ ‘ಪಿಲಿಕುಳ ಕಂಬಳ’ವನ್ನು ನ.17 ಮತ್ತು 18 ರಂದು ನಡೆಸಲು ನಿರ್ಧರಿಸಲಾಗಿದೆ.  ಡಿಸೆಂಬರ್‌ನಲ್ಲಿ ನಗರದ ಲಾಲ್‌ಬಾಗ್‌ನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದ ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳನ್ನು ಪಿಲಿಕುಳಕ್ಕೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ದಿನೇಸ್ ಗುಂಡೂರಾವ್ ಅವರು, ಕಂಬಳಕ್ಕೆ ಸಂಬಂಧಿಸಿ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪಿಲಿಕುಳದಲ್ಲಿ ಕಂಬಳಕ್ಕೆ ಸಂಬಂಧಿಸಿ ಕಂಬಳ ಕರೆ ನಿರ್ಮಾಣದ ಕಾರ್ಯ ಶೇ.70 ರಷ್ಟು ಪೂರ್ಣಗೊಂಡಿದೆ. ಕರೆ ನಿರ್ಮಾಣ, ಕಂಬಳ ಆಯೋಜನೆ ಸೇರಿದಂತೆ ಸುಮಾರು 70 ಲಕ್ಷ ರೂ.ಅನುದಾನ ಅಗತ್ಯವಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ 5 ಲಕ್ಷ ರೂ.ಗಳನ್ನು ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ರಶ್ಮಿ ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror