ಮಂಗಳೂರು ಹೊರವಲಯದ ಪಿಲಿಕುಳದ ಡಾ.ಶಿವರಾಮ ಕಾರಂತ ಜೈವಿಕ ಉದ್ಯಾನವನದಲ್ಲಿ ಈ ವರ್ಷದಿಂದ ಸರ್ಕಾರಿ ಪ್ರಾಯೋಜಿತ ‘ಪಿಲಿಕುಳ ಕಂಬಳ’ವನ್ನು ನ.17 ಮತ್ತು 18 ರಂದು ನಡೆಸಲು ನಿರ್ಧರಿಸಲಾಗಿದೆ. ಡಿಸೆಂಬರ್‌ನಲ್ಲಿ ನಗರದ ಲಾಲ್‌ಬಾಗ್‌ನ ಕರಾವಳಿ ಉತ್ಸವ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದ ಕರಾವಳಿ ಉತ್ಸವದ ಪ್ರಮುಖ ಕಾರ್ಯಕ್ರಮಗಳನ್ನು ಪಿಲಿಕುಳಕ್ಕೂ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕಂಬಳ ಆಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ದಿನೇಸ್ ಗುಂಡೂರಾವ್ ಅವರು, ಕಂಬಳಕ್ಕೆ ಸಂಬಂಧಿಸಿ ಮುಂದಿನ ರೂಪುರೇಷೆಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪಿಲಿಕುಳದಲ್ಲಿ ಕಂಬಳಕ್ಕೆ ಸಂಬಂಧಿಸಿ ಕಂಬಳ ಕರೆ ನಿರ್ಮಾಣದ ಕಾರ್ಯ ಶೇ.70 ರಷ್ಟು ಪೂರ್ಣಗೊಂಡಿದೆ. ಕರೆ ನಿರ್ಮಾಣ, ಕಂಬಳ ಆಯೋಜನೆ ಸೇರಿದಂತೆ ಸುಮಾರು 70 ಲಕ್ಷ ರೂ.ಅನುದಾನ ಅಗತ್ಯವಿದೆ. ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿಯವರು ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಿಂದ 5 ಲಕ್ಷ ರೂ.ಗಳನ್ನು ನಿರ್ಮಿತಿ ಕೇಂದ್ರಕ್ಕೆ ಹಸ್ತಾಂತರಿಸಿದ್ದಾರೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪ ನಿರ್ದೇಶಕಿ ರಶ್ಮಿ ಮಾಹಿತಿ ನೀಡಿದರು.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…
ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…
ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.
ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…
ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…
ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…