ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದ್ದಾರೆ.
ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಎರಡು ದಿನಗಳ ಕೃಷಿಕರ ಸಮೃದ್ಧಿಗಾಗಿ ಸಸ್ಯಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ 14 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆಯಲ್ಲದೇ, ಈ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆ ಹೊಂದಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ 1950 ರಿಂದ ದೇಶದ ರೈತರ ಸಾಧನೆ ಸತತವಾಗಿ ಏರಿಕೆಯಾಗುತ್ತಿದೆ. 1985 ರಿಂದ ಇಂದಿನವರೆಗೆ ಶೇಕಡ.300ರಷ್ಟು ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ ಎಂದು ಹೇಳಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel