ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ

October 2, 2024
10:11 PM
ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆಯನ್ನು ಸರ್ಕಾರ ಹೊಂದಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದರು.

ದೇಶದ ಕೃಷಿ ವಿಜ್ಞಾನ ಕೇಂದ್ರಗಳನ್ನು ನಾಲೆಡ್ಜ್ ಹಬ್‌ಗಳನ್ನಾಗಿ ಮಾಡಲು ಕೇಂದ್ರ ಸರ್ಕಾರ ಯೋಜನೆ ಹಾಕಿಕೊಂಡಿದೆ ಎಂದು ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯ ಡಾ.ಕೆ.ಪಿ.ಬಸವರಾಜಪ್ಪ ಹೇಳಿದ್ದಾರೆ.     

ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಆರಂಭಗೊಂಡ ಎರಡು ದಿನಗಳ ಕೃಷಿಕರ ಸಮೃದ್ಧಿಗಾಗಿ ಸಸ್ಯಸಂತೆ ಮತ್ತು ಸಾವಯವ ಕೃಷಿ ಪರಿಕರಗಳ ಪ್ರದರ್ಶನ ಹಾಗೂ ಮಾರಾಟ ಮೇಳದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ದೇಶದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ 14 ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದೆಯಲ್ಲದೇ, ಈ ಕ್ಷೇತ್ರದಲ್ಲಿ ಹೊಸ ಪ್ರಯೋಗಗಳನ್ನು ಮಾಡಿ, ರೈತರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ ಚಿಂತನೆ ಹೊಂದಿದೆ ಎಂದು ಹೇಳಿದರು. ಕೃಷಿ ಕ್ಷೇತ್ರದಲ್ಲಿ 1950  ರಿಂದ ದೇಶದ ರೈತರ ಸಾಧನೆ ಸತತವಾಗಿ ಏರಿಕೆಯಾಗುತ್ತಿದೆ. 1985 ರಿಂದ ಇಂದಿನವರೆಗೆ ಶೇಕಡ.300ರಷ್ಟು  ಆಹಾರ ಧಾನ್ಯ ಉತ್ಪಾದನೆ ಹೆಚ್ಚಳವಾಗಿದೆ ಎಂದು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ
October 10, 2026
2:44 PM
by: ದ ರೂರಲ್ ಮಿರರ್.ಕಾಂ
ಉಪ್ಪಿನಂಗಡಿಯ ಮೌಲ್ಯಾಧಾರಿತ ಶಿಕ್ಷಣ ಕ್ರಾಂತಿಯ ಹರಿಕಾರ ಯು.ಜಿ. ರಾಧ ಭಟ್ – ಗ್ರಾಮೀಣ ನೆಲದಲ್ಲಿ ಅರಳಿದ ಶ್ರೀರಾಮ ಶಾಲೆಯ ಯಶೋಗಾಥೆ
October 10, 2026
2:06 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror