ವಿಶ್ವ ಪರಿಸರ ದಿನ. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಸೇರಿದಂತೆ ಹಲವು ಗಣ್ಯರು ಪರಿಸರ ದಿನದ ಶುಭಾಶಯ ಕೋರಿದ್ದಾರೆ. ಹಸಿರು ಪಥ ಕಾರ್ಯಕ್ರಮದಡಿ ದಾವಣಗೆರೆ ಜಿಲ್ಲೆಯ ಜಿಲ್ಲಾ ಮುಖ್ಯ ರಸ್ತೆ ಮತ್ತು ಗ್ರಾಮೀಣ ರಸ್ತೆಗಳ ಎರಡೂ ಬದುಗಳಲ್ಲಿ 113 ಕಿಲೋಮೀಟರ್ ದೂರದವರೆಗೆ ಸಸಿ ನೆಡಲಾಗುವುದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಸುರೇಶ್ ಇಟ್ನಾಳ್ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ದಾವಣಗೆರೆಯಲ್ಲಿ ವಿವಿಧ ಕಡೆಗಳಲ್ಲಿ ನಡೆದ ಸಸಿ ನೆಡುವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ಕಿಲೋಮೀಟರ್‌ಗೆ 300 ಗಿಡಗಳಂತೆ 30 ಸಾವಿರ ಗಿಡಗಳ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿವಿದೆಡೆ ಪ್ಲಾಸ್ಟಿಕ್ ಮಾಲಿನ್ಯ ಹೊಡೆದೋಡಿಸೋಣ ಧ್ಯೇಯವಾಕ್ಯದೊಂದಿಗೆ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು. ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವಿಶ್ವ ಪರಿಸರ ದಿನ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಗೃತಿ ಜಾಥಾ ನಡೆಯಿತು.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…