ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

March 11, 2026
9:28 PM
ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಅಥವಾ ಗುಟ್ಕಾ ಉಗುಳಿದರೆ ₹1000 ವರೆಗೆ ದಂಡ ವಿಧಿಸುವ ಎಚ್ಚರಿಕೆ ನೀಡಲಾಗಿದೆ.

ಹೋಟೆಲ್‌, ಕ್ಯಾಂಟೀನ್‌, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್‌ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ರಾಜು ಕೆ. ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಪ್ಲಾಸ್ಟಿಕ್‌ನಲ್ಲಿರುವ ಹಾನಿಕಾರಕ ರಾಸಾಯನಿಕಗಳು ಬಿಸಿ ಆಹಾರಕ್ಕೆ ಸೇರಿ ಕ್ಯಾನ್ಸರ್‌ ಸೇರಿದಂತೆ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಹೋಟೆಲ್‌ಗಳಿಂದ ಕಾರ್ಮಿಕರು ಹಾಗೂ ಆಸ್ಪತ್ರೆಗಳಲ್ಲಿ ಇರುವ ರೋಗಿಗಳಿಗೆ ಹೆಚ್ಚಾಗಿ ಬಿಸಿ ಆಹಾರವನ್ನು ಪ್ಲಾಸ್ಟಿಕ್ ಅಥವಾ ಪತ್ರಿಕೆಗಳಲ್ಲಿ ಪಾರ್ಸೆಲ್‌ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ, ಈ ಪದ್ಧತಿಯನ್ನು ಕಡ್ಡಾಯವಾಗಿ ನಿಲ್ಲಿಸಲು ಸಂಬಂಧಿಸಿದ ಇಲಾಖೆಗಳಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಕಟ್ಟುನಿಟ್ಟು : ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌, ತಂಬಾಕು ಸೇವನೆ ನಿಷೇಧದ ಬಗ್ಗೆ ಎಚ್ಚರಿಕೆಯ ಫಲಕಗಳಿಲ್ಲದಿದ್ದರೆ ಹಾಗೂ ಅಂಗಡಿ, ಹೋಟೆಲ್‌ಗಳಲ್ಲಿ ಸಿಗರ್‌ ಲೈಟರ್‌, ಬೆಂಕಿ ಪೊಟ್ಟಣಗಳನ್ನು ಇಟ್ಟಿದ್ದರೂ ದಂಡ ವಿಧಿಸಬೇಕು ಎಂದು ಸೂಚನೆ ನೀಡಲಾಗಿದೆ.

ತಂಬಾಕು ಬ್ರಾಂಡ್‌ ಹೆಸರಿನ ಜಾಹೀರಾತು ಫಲಕಗಳು, 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ತಂಬಾಕು ಮಾರಾಟ, ಚಿಲ್ಲರೆ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಪ್ರದರ್ಶನ ಸೇರಿದಂತೆ ವಿವಿಧ ಉಲ್ಲಂಘನೆಗಳ ಮೇಲೂ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.

ಶಾಲಾ–ಕಾಲೇಜುಗಳ ಬಳಿ ತಂಬಾಕು ಮಾರಾಟಕ್ಕೆ ನಿಗಾ :  ಶಾಲಾ–ಕಾಲೇಜುಗಳ 100 ಮೀಟರ್‌ ವ್ಯಾಪ್ತಿಯಲ್ಲಿ ತಂಬಾಕು ಮಾರಾಟ ಮಾಡುವವರ ಬಗ್ಗೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ನಿಗಾವಹಿಸಿ, ಅಂತಹ ಅಂಗಡಿಗಳ ಪಟ್ಟಿಯನ್ನು ಸ್ಥಳೀಯಾಡಳಿತ ಮತ್ತು ಪೊಲೀಸ್‌ ಠಾಣೆಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಿದರು.

ಪೊಲೀಸ್‌, ಶಿಕ್ಷಣ ಇಲಾಖೆ ಹಾಗೂ ಸ್ಥಳೀಯಾಡಳಿತ ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಜಿಲ್ಲೆಯಲ್ಲಿ ತಂಬಾಕು ಸೇವನೆ ಹಾಗೂ ಮಾರಾಟವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದರು.

₹1000 ವರೆಗೆ ದಂಡ :  ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದವರಿಗೆ ಹಾಗೂ ಗುಟ್ಕಾ ಜಗಿದು ಉಗಿದವರಿಗೆ ₹1000 ವರೆಗೆ ದಂಡ ವಿಧಿಸಲಾಗುತ್ತದೆ. ಚಿಲ್ಲರೆ ಸಿಗರೇಟ್‌ ಮಾರಾಟಕ್ಕೂ ಅವಕಾಶವಿಲ್ಲ.

ಕೋಟ್ಪಾ ಕಾಯ್ದೆಯಡಿ ಜಿಲ್ಲೆಯಲ್ಲಿ ಇದುವರೆಗೆ 2,587 ಪ್ರಕರಣಗಳು ದಾಖಲಾಗಿದ್ದು ₹3.89 ಲಕ್ಷ ದಂಡ ವಸೂಲಿ ಮಾಡಲಾಗಿದೆ. ತಂಬಾಕು ಜಾಹೀರಾತು ಫಲಕಗಳಾಗಿ ಕಂಡು ಬಂದ ಸುಮಾರು 52 ಬೋರ್ಡ್‌ಗಳನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್‌ಚಂದ್ರ ಕುಲಾಲ್‌, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Authorities in Mangaluru have been directed to ban the use of plastic covers and newspapers for packing hot food in hotels and eateries due to potential health risks. Strict enforcement of tobacco control rules has also been ordered, with fines up to ₹1000 for smoking or spitting gutka in public places and penalties for violations near educational institutions.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ
May 14, 2026
2:42 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ
May 14, 2026
2:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!
May 13, 2026
12:40 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |
May 12, 2026
1:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror