ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೀಡುವ ಅನುದಾನ ಮೊತ್ತವನ್ನು 69 ಸಾವಿರದ 515 ಕೋಟಿ ರೂಪಾಯಿಗೆ ಏರಿಸಲಾಗಿದೆ. …..ಮುಂದೆ ಓದಿ….
ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಸಂಪುಟ ಸಭೆಯ ವಿವರಗಳನ್ನು ನೀಡಿದರು. ಹೊಸ ವರ್ಷದ ಮೊದಲ ಸಚಿವ ಸಂಪುಟ ಸಭೆಯನ್ನು ಪ್ರಧಾನಿಯವರು ರೈತರಿಗೆ ಸಮರ್ಪಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಸಂಬಂಧಿಸಿದ ವಿವಿಧ ಆಯಾಮಗಳ ಬಗ್ಗೆ ಚರ್ಚಿಸಲಾಗಿದ್ದು, ರೈತರ ಕಲ್ಯಾಣಕ್ಕೆ ಸಂಪೂರ್ಣ ಕೇಂದ್ರೀಕರಿಸಲಾಗಿದೆ. ರೈತರ ಬದುಕಿನಲ್ಲಿ ಮಹತ್ವದ ಬದಲಾವಣೆ ತರುತ್ತಿರುವ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಗೆ ನೀಡುವ ಅನುದಾನ ಮೊತ್ತವನ್ನು 69 ಸಾವಿರದ 515 ಕೋಟಿ ರೂಪಾಯಿಗೆ ಏರಿಸಲಾಗಿದೆ. ಈ ನಿರ್ಧಾರದಿಂದ ನಾಲ್ಕು ಕೋಟಿ ರೈತರಿಗೆ ಪ್ರಯೋಜನವಾಗಲಿದೆ. ಫಸಲ್ ಬಿಮಾ ಯೋಜನೆ ಮೂರನೇ ಅತಿದೊಡ್ಡ ವಿಮಾ ಯೋಜನೆಯಾಗಿದೆ. ಯೋಜನೆಯಡಿ ಕಳೆದ 8 ವರ್ಷಗಳಲ್ಲಿ 70 ಸಾವಿರ ಕೋಟಿ ರೂಪಾಯಿ ವಿಮಾ ಮೊತ್ತ ಪಾವತಿಸಲಾಗಿದೆ ಎಂದರು.
ಫಸಲ್ ಬಿಮಾ ಯೋಜನೆಯಡಿ ಆವಿಷ್ಕಾರ ಮತ್ತು ತಂತ್ರಜ್ಞಾನಕ್ಕೆ 800 ಕೋಟಿ ರೂಪಾಯಿ ನಿಧಿ ಒದಗಿಸಲಾಗಿದೆ. ಯೋಜನೆಯಡಿ ಸುಲಭವಾಗಿ ನೋಂದಣಿ ಮಾಡಿಕೊಳ್ಳಲು ಮತ್ತು ವಿಮಾದಾರರ ವ್ಯಾಪ್ತಿ ಹೆಚ್ಚಿಸಲು ಸರ್ಕಾರ ಈ ಪ್ರಕ್ರಿಯೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲು ನಿರ್ಧರಿಸಿದೆ. ಈಶಾನ್ಯ ಮತ್ತು ಹಿಮಾಲಯ ಪ್ರಾಂತ್ಯದ ರಾಜ್ಯಗಳಿಗೆ ನಿಧಿಯನ್ನು 90:10 ಅನುಪಾತದಲ್ಲಿ, ಇತರ ರಾಜ್ಯಗಳಿಗೆ 50:50 ಅನುಪಾತದಲ್ಲಿ ನೀಡಲಾಗುವುದು. ಯೋಜನೆಯಡಿ ಶೇಕಡಾ 88ರಷ್ಟು ರೈತರು ಕಡಿಮೆ ಆದಾಯ ಹೊಂದಿದವರಾಗಿದ್ದು, ಶೇಕಡಾ 57ರಷ್ಟು ರೈತರು ಒಬಿಸಿ, ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಸೇರಿದವರಾಗಿದ್ದಾರೆ ಎಂದರು.
50 ಕೆ.ಜಿ. ಡಿಎಪಿ ರಸಗೊಬ್ಬರ ಚೀಲಕ್ಕೆ 1 ಸಾವಿರದ 350 ರೂಪಾಯಿ ಮುಂದುವರಿಸಲಾಗಿದೆ. ಇತರ ದೇಶಗಳಲ್ಲಿ ಡಿಎಪಿ ದರ 3 ಸಾವಿರಕ್ಕೂ ಅಧಿಕವಾಗಿದೆ. ಈ ಪ್ಯಾಕೇಜ್ ಗೆ 3 ಸಾವಿರದ 850 ಕೋಟಿ ರೂಪಾಯಿ ವೆಚ್ಚವಾಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಮಾರುಕಟ್ಟೆ ಏರಿಳಿತಗಳಿಂದ ರೈತರಿಗೆ ಹೊರೆಯಾಗದಂತೆ ಹಲವು ಮಹತ್ವದ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 2014ರಿಂದ 2024ರ ವರೆಗೆ 11 ಲಕ್ಷ 90 ಸಾವಿರ ಕೋಟಿ ರೂಪಾಯಿ ರಸಗೊಬ್ಬರ ಸಬ್ಸಿಡಿ ನೀಡಲಾಗಿದೆ. ಇದು 2004ರಿಂದ 2014ರ ವರೆಗೆ ನೀಡಲಾದ ಸಬ್ಸಿಡಿಗಿಂತ ಎರಡುಪಟ್ಟು ಹೆಚ್ಚು ಎಂದರು.
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…
ಕೋಲಾರ ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ಆದ್ಯತೆ ಮೇರೆಗೆ ತೆರವುಗಳಿಸಲು ಕ್ರಮ ಕೈಗೊಳ್ಳಬೇಕು ಎಂದು…
ತೆಂಗು ಬೆಳೆ ಉತ್ಪಾದನೆ ಹೆಚ್ಚಿಸಲು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಕೈಗೊಂಡಿದ್ದು, ವಿಶ್ವದಲ್ಲೇ…