ಪಿಎಂ ಕಿಸಾನ್ 13 ನೇ ಕಂತು ಬಿಡುಗಡೆ ಮಾಡಿದ ಪಿಎಂ ನರೇಂದ್ರ ಮೋದಿ | ರೈತರ ಖಾತೆಗೆ ಜಮೆಯಾದ ಹಣ | ರೈತರ ಖಾತೆಗಳಿಗೆ ಒಂದು ಕ್ಲಿಕ್ ಮೂಲಕ ಹಣ ವರ್ಗಾವಣೆ |

February 27, 2023
6:07 PM

ಪ್ರಧಾನಿ ನರೇಂದ್ರ ಮೋದಿ ಇಂದು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣವನ್ನು ಫಲಾನುಭವಿ ರೈತರಿಗೆ ಬಿಡುಗಡೆ ಮಾಡಿದ್ದಾರೆ. ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಆಯೋಜಿಸಲಾದ ಸಮಾವೇಶದಲ್ಲಿ ಪ್ರಧಾನಿ 16 ಸಾವಿರ ಕೋಟಿ ರೂಗೂ ಹೆಚ್ಚು ಮೊತ್ತದ ಹಣವನ್ನು ಬಿಡುಗಡೆ ಮಾಡಿದರು.  ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ನಿಮಗೆ ಇನ್ನೂ ಬಂದಿಲ್ಲದಿದ್ದರೆ ಕಿಸಾನ್ ಪೋರ್ಟಲ್​ಗೆ ಹೋಗಿ ಅಲ್ಲಿ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯಾ ಎಂದು ಮೊದಲು ಖಾತ್ರಿಪಡಿಸಿಕೊಳ್ಳಿ.  

ಇದರೊಂದಿಗೆ 8 ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ ತಲಾ 2 ಸಾವಿರ ರೂ ಜಮೆಯಾಗಲಿದೆ. ಕರ್ನಾಟಕದಲ್ಲಿ ಪಿಎಂ ಕಿಸಾನ್ ಯೋಜನೆಯ 49 ಲಕ್ಷ ಫಲಾನುಭವಿಗಳಿಗೆ ಪಿಎಂ ಮೋದಿ ಉಡುಗೊರೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ದೇಶದ ಎಲ್ಲಾ ಫಲಾನುಭವಿ ರೈತರ ಖಾತೆಗಳಿಗೆ ಒಂದು ಕ್ಲಿಕ್ ಮೂಲಕ ಹಣ ವರ್ಗಾವಣೆ ಆಗಿದೆ. ಮಧ್ಯವರ್ತಿಗಳ ಕಾಟ ಇಲ್ಲದೇ ನೇರವಾಗಿ ಹಣ ರೈತರನ್ನು ತಲುಪಿದೆ. ಕಾಂಗ್ರೆಸ್ ಸರ್ಕಾರ ಇದ್ದಾಗ ಕೋಟಿ ಹಣ ಬಿಡುಗಡೆ ಮಾಡಿದರೆ ಪೂರ್ಣವಾಗಿ ಯಾರ ಕೈಗೂ ತಲುಪುತ್ತಿರಲಿಲ್ಲ. ದಶಕಗಳವರೆಗೂ ಕಾಂಗ್ರೆಸ್ಸಿಗರು ರೈತರನ್ನು ಕಡೆಗಣಿಸಿದ್ದರು ಎಂದರು. ಭಾರತದ ಭವಿಷ್ಯದ ದೃಷ್ಟಿಯಿಂದ ಕೃಷಿ ಕ್ಷೇತ್ರಕ್ಕೆ ಹೆಚ್ಚು ಒತ್ತು ನೀಡಿದ್ದೇವೆ. ಬಜೆಟ್​ನಲ್ಲಿ ಈ ಕ್ಷೇತ್ರಕ್ಕೆ 1 ಲಕ್ಷ ಕೋಟಿಗೂ ಹೆಚ್ಚು ಅನುದಾನ ಮೀಸಲಿಡಲಾಗಿದೆ. ರೈತರಿಗೆ ಪಿಎಂ ಪ್ರಮಾಣ್ ಸೇರಿದಂತೆ ಹಲವು ಯೋಜನೆಗಳನ್ನು ಪ್ರಕಟಿಸಿದ್ದೇವೆ ಎಂದು ಪ್ರಧಾನಿಗಳು ಹೇಳಿದರು.

Advertisement
Advertisement
Advertisement
Advertisement

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಿಎಂ ಬಸವರಾಜ ಬೊಮ್ಮಾಯಿ, ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ ಮೊದಲಾದ ಹಲವರು ಈ ಕಾರ್ಯಕ್ರಮದಲ್ಲಿದ್ದರು. ಪಿಎಂ ಮೋದಿ ಇದಕ್ಕೆ ಮುನ್ನ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿ ಬಂದಿದ್ದರು. ಬಳಿಕ ಬೆಳಗಾವಿಯಲ್ಲಿ ರೋಡ್​ಶೋ ಕೂಡ ನಡೆಸಿದರು.

Advertisement

ಈ ಬಾರಿ ಕಂತಿನ ಹಣ ಬಿಡುಗಡೆಗೆ ಮುನ್ನ ರೈತರು ಕೆವೈಸಿ ಪರಿಷ್ಕರಿಸುವುದು ಅಗತ್ಯವಿತ್ತು. ಹೀಗಾಗಿ, ಹಣ ಬಿಡುಗಡೆ ತುಸು ವಿಳಂಬಗೊಂಡಿತ್ತು. ಕೆವೈಸಿ ಅಪ್​ಡೇಟ್ ಮಾಡಿದ ಎಲ್ಲಾ ರೈತರಿಗೂ 13ನೇ ಕಂತಿನ ಹಣ ಸಿಗಲಿದೆ. ಕೆಲ ರೈತರಿಗೆ ಇಂದೇ ಖಾತೆಗೆ ಹಣ ವರ್ಗಾವಣೆ ಆಗಬಹುದು. ಕೆಲವರಿಗೆ ಒಂದು ವಾರ ಆಗಬಹುದು.

ಒಂದು ವೇಳೆ ನಿಮ್ಮ ಬ್ಯಾಂಕ್ ಖಾತೆ ಹಣ ಜಮೆ ಆಗಿರದಿದ್ದರೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಪೋರ್ಟಲ್​ಗೆ ಹೋಗಿ ಪರಿಶೀಲನೆ ನಡೆಸಬಹುದು. ಪೋರ್ಟಲ್​ನಲ್ಲಿ ಬೆನಿಫಿಶಿಯರಿ ಸ್ಟೇಟಸ್ ಟ್ಯಾಬ್​ಗೆ ಹೋಗಿ ಅಲ್ಲಿ ನಿಮ್ಮ ನೊಂದಾಯಿತ ಮೊಬೈಲ್ ನಂಬರ್ ಹಾಕಿದರೆ ವಿವರ ಸಿಗುತ್ತದೆ.

Advertisement

ಹಾಗೆಯೇ, ಬೆನಿಫಿಶಿಯರಿ ಲಿಸ್ಟ್ ಟ್ಯಾಬ್​ಗೆ ಹೋಗಿ ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್ ಮತ್ತು ಗ್ರಾಮದ ಹೆಸರನ್ನು ನಮೂದಿಸಿದರೆ ಆ ಊರಿನ ಎಲ್ಲಾ ಫಲಾನುಭವಿಗಳ ಪಟ್ಟಿ ಸಿಗುತ್ತದೆ. ಒಂದು ವೇಳೆ ನೀವು ಫಲಾನುಭವಿಯಾಗಲು ಅರ್ಹರಿದ್ದೂ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಮತ್ತೊಮ್ಮೆ ನೊಂದಾವಣಿ ಮಾಡಿಸಬೇಕಾಗಬಹುದು. ಅಥವಾ ಸಮೀಪದ ಸಿಎಸ್​ಸಿ ಕೇಂದ್ರಕ್ಕೆ ಹೋಗಿ ಸಂಪರ್ಕಿಸಬಹುದು.

ಎಲ್ಲಾ ರೈತರೂ ಅರ್ಹರಾ?

Advertisement

ಯೋಜನೆಯ ಆರಂಭದಲ್ಲಿ ಸಣ್ಣ ರೈತರಿಗೆಂದು ಉದ್ದೇಶಿಸಲಾಗಿತ್ತು. ಅಂದರೆ 2 ಹೆಕ್ಟೇರ್​ಗಿಂತ ಹೆಚ್ಚು ಜಮೀನು ಇರದ ರೈತರಿಗೆ ಧನಸಹಾಯ ನೀಡಲಾಗುತ್ತಿತ್ತು. ಇತ್ತೀಚೆಗೆ ಈ ಯೋಜನೆಯನ್ನು ಎಲ್ಲಾ ರೈತರಿಗೂ ವಿಸ್ತರಿಸಲಾಗಿದೆ.

ಆದರೆ, ವೃತ್ತಿಪರರು, ಸರ್ಕಾರಿ ನೌಕರರು ಮೊದಲಾದವರು ರೈತರಾಗಿದ್ದರೂ ಈ ಯೋಜನೆಯ ಫಲಾನುಭವಿಗಲು ಅರ್ಹರಿರುವುದಿಲ್ಲ. ಹಾಗೆಯೇ, ಐಟಿ ರಿಟರ್ನ್ಸ್ ಸಲ್ಲಿಸುತ್ತಿರುವವರನ್ನೂ ಯೋಜನೆಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಒಂದು ವೇಳೆ ಯೋಜನೆಗೆ ಯಾವುದೇ ರೈತ ಅರ್ಹನಾಗಿದ್ದರೂ ಅವರ ಕುಟುಂಬದಲ್ಲಿ ಯಾರಾದರೂ ಆದಾಯ ತೆರಿಗೆ ಪಾವತಿಸುವವರಾಗಿದ್ದರೆ ಅಂಥವರೂ ಯೋಜನೆಗೆ ಅರ್ಹರಾಗಿರುವುದಿಲ್ಲ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ
ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |
February 20, 2025
6:58 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror