Advertisement
ಕೃಷಿ

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

Share

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 22ನೇ ಕಂತಿನ ಹಣವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಗುವಾಹಟಿಯಲ್ಲಿ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಿದ್ದಾರೆ.

ಈ ಕಂತಿನಡಿ ದೇಶಾದ್ಯಂತ ಸುಮಾರು 9 ಕೋಟಿ 32 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಒಟ್ಟು ₹18,640 ಕೋಟಿ ರೂಪಾಯಿಗಳನ್ನು ವರ್ಗಾಯಿಸಲಾಗುತ್ತದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರು, ಈ ಮಹತ್ವಾಕಾಂಕ್ಷೆಯ ಯೋಜನೆಯಡಿ ಇದುವರೆಗೆ ರೈತರಿಗೆ ₹4 ಲಕ್ಷ 9 ಸಾವಿರ ಕೋಟಿ ರೂಪಾಯಿಗಳಿಗೂ ಹೆಚ್ಚು ಮೊತ್ತವನ್ನು ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಿಡುಗಡೆಯಾಗಲಿರುವ ಮುಂದಿನ ಕಂತಿನೊಂದಿಗೆ ಈ ಒಟ್ಟು ಮೊತ್ತವು ₹4 ಲಕ್ಷ 27 ಸಾವಿರ ಕೋಟಿ ರೂಪಾಯಿಗಳ ಗಡಿಯನ್ನು ಮೀರಲಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆದಾಯ ಬೆಂಬಲ ಒದಗಿಸುವ ಉದ್ದೇಶದಿಂದ ಜಾರಿಯಲ್ಲಿದ್ದು, ವರ್ಷಕ್ಕೆ ಮೂರು ಕಂತುಗಳಲ್ಲಿ ₹6,000 ಸಹಾಯಧನವನ್ನು DBT ಮೂಲಕ ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Prime Minister Narendra Modi will release the 22nd installment of the PM-Kisan Samman Nidhi scheme in Guwahati. About ₹18,640 crore will be directly transferred to the bank accounts of 9.32 crore farmers, taking the total disbursal under the scheme beyond ₹4.27 lakh crore.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

8 hours ago

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…

15 hours ago

ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…

15 hours ago

ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…

15 hours ago

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

1 day ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

1 day ago