PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

June 19, 2026
8:44 PM
PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ ಮಾಡಲಾಗುತ್ತದೆ. ಕರ್ನಾಟಕದ 41.54 ಲಕ್ಷ ರೈತರಿಗೆ ಒಟ್ಟು ₹830.83 ಕೋಟಿ ನೆರವು ದೊರೆಯಲಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯ 23ನೇ ಕಂತಿನ ಆರ್ಥಿಕ ನೆರವನ್ನು ಜೂನ್ 20ರಂದು ಬಿಡುಗಡೆ ಮಾಡಲಾಗುತ್ತಿದೆ.

ಪ್ರಧಾನಮಂತ್ರಿ ಅವರು ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಂಜೆ 4 ಗಂಟೆಗೆ ನಡೆಯಲಿರುವ ವಿಶೇಷ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ನೇರ ನಗದು ವರ್ಗಾವಣೆ (DBT) ಮೂಲಕ ಹಣ ಜಮೆ ಮಾಡಲಿದ್ದಾರೆ. ಈ ದಿನವನ್ನು “PM-KISAN ಉತ್ಸವ ದಿವಸ್” ಎಂದು ಆಚರಿಸಲಾಗುತ್ತಿದೆ.

ಕರ್ನಾಟಕದ ರೈತರಿಗೆ ₹830.832 ಕೋಟಿ :  23ನೇ ಕಂತಿನ ಹಣ ಬಿಡುಗಡೆ ವೇಳೆ ಕರ್ನಾಟಕ ರಾಜ್ಯದ 41,54,160 ಫಲಾನುಭವಿ ರೈತರಿಗೆ ಒಟ್ಟು ₹830.832 ಕೋಟಿ ಆರ್ಥಿಕ ನೆರವು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆಯಾಗಲಿದೆ.

ಈ ಯೋಜನೆಯಡಿ ಪ್ರತಿ ಅರ್ಹ ರೈತ ಕುಟುಂಬಕ್ಕೆ ವಾರ್ಷಿಕ ₹6,000 ಆರ್ಥಿಕ ನೆರವು ನೀಡಲಾಗುತ್ತದೆ. ಈ ಮೊತ್ತವನ್ನು ತಲಾ ₹2,000ರಂತೆ ಮೂರು ಸಮಾನ ಕಂತುಗಳಲ್ಲಿ ಪ್ರತಿ ನಾಲ್ಕು ತಿಂಗಳಿಗೊಮ್ಮೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

2019ರಿಂದ ಯೋಜನೆ ಜಾರಿ :  ಕರ್ನಾಟಕದಲ್ಲಿ ಫೆಬ್ರವರಿ 2019ರಿಂದ PM-KISAN ಯೋಜನೆ ಜಾರಿಯಲ್ಲಿದೆ. 2019ರ ಫೆಬ್ರವರಿ 1ರ ಅನ್ವಯ ಸಾಗುವಳಿ ಭೂಮಿ ಹೊಂದಿರುವ ಅರ್ಹ ರೈತ ಕುಟುಂಬಗಳು (ಗಂಡ, ಹೆಂಡತಿ ಹಾಗೂ ಅಪ್ರಾಪ್ತ ಮಕ್ಕಳು) ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಕೃಷಿ ಚಟುವಟಿಕೆಗಳ ನಿರ್ವಹಣೆ, ಬಿತ್ತನೆ, ಗೊಬ್ಬರ ಖರೀದಿ, ಕಾರ್ಮಿಕ ವೆಚ್ಚ ಸೇರಿದಂತೆ ವಿವಿಧ ಕೃಷಿ ಅವಶ್ಯಕತೆಗಳಿಗೆ ಈ ನೆರವು ರೈತರಿಗೆ ಆರ್ಥಿಕ ಬೆಂಬಲ ಒದಗಿಸುತ್ತಿದೆ.

ರೈತರಿಗೆ ಸಕಾಲಿಕ ನೆರವು :  ಪ್ರಧಾನ ಮಂತ್ರಿಗಳ ನೇರ ನಗದು ವರ್ಗಾವಣೆ ವ್ಯವಸ್ಥೆಯಿಂದ ರಾಜ್ಯದ ಲಕ್ಷಾಂತರ ರೈತ ಕುಟುಂಬಗಳಿಗೆ ಕೃಷಿ ಚಟುವಟಿಕೆಗಳ ನಿರ್ವಹಣೆಗೆ ಅಗತ್ಯವಿರುವ ಹಣಕಾಸಿನ ನೆರವು ಸಕಾಲದಲ್ಲಿ ದೊರೆಯಲಿದ್ದು, ಕೃಷಿ ಉತ್ಪಾದಕತೆ ಹೆಚ್ಚಿಸಲು ಸಹಕಾರಿಯಾಗಲಿದೆ.

The 23rd installment of the PM-KISAN scheme will be released on June 20, with the Prime Minister transferring funds directly to farmers’ bank accounts through DBT. In Karnataka, 41.54 lakh beneficiary farmers will receive a total assistance of ₹830.832 crore under the scheme, which provides ₹6,000 annually in three installments.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?
September 30, 2026
7:21 AM
by: ದ ರೂರಲ್ ಮಿರರ್.ಕಾಂ
ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?
September 29, 2026
11:09 PM
by: ದ ರೂರಲ್ ಮಿರರ್.ಕಾಂ
ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?
September 29, 2026
10:23 PM
by: ದ ರೂರಲ್ ಮಿರರ್.ಕಾಂ
ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು
September 29, 2026
9:48 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror