ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM Kisan Yojana ) ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಇದೇ ಸೆಪ್ಟೆಂಬರ್ 22 ಕೊನೆಯ ದಿನವಾಗಿದೆ. ರೈತರು ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳ್ಳಲಿದೆ.
ಸ್ಮಾರ್ಟ್ ಫೋನ್ ಬಳಸುವ ರೈತರು http://pmkisan.gov.in ಪೋರ್ಟಲ್‍ನ ಫಾರ್ಮರ್ಸ್ ಕೋರ್ನರ್ ನಲ್ಲಿ ಇ-ಕೆವೈಸಿ ಅವಕಾಶದಡಿ ತಮ್ಮ ಆಧಾರ್ ಸಂಖ್ಯೆಯನ್ನು ಮತ್ತು ಮೊಬೈಲ್ ಸಂಖ್ಯೆಯನ್ನು ದಾಖಲಿಸಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು. ರೈತರು ನಾಗರಿಕ ಸೇವಾ ಕೇಂದ್ರ (ಸಿಎಸ್‍ಸಿ)/ ಗ್ರಾಮಒನ್ ಸೇವಾ ಕೇಂದ್ರದಲ್ಲಿಯೂ ಬಯೋಮೆಟ್ರಿಕ್ ಆಧಾರಿತವಾಗಿ ಇ-ಕೆವೈಸಿಯನ್ನು ಮಾಡಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿಯ ರೈತ ಸಂಪರ್ಕ ಕೇಂದ್ರ ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…