2014ರ ತನಕ ದೇಶದಲ್ಲಿ 75 ಗಿಗಾ ವ್ಯಾಟ್ ಮಾತ್ರ ನವೀಕರಿಸಬಹುದಾದ ಇಂಧನ ಉತ್ಪಾದನೆ ಆಗುತ್ತಿತ್ತು. ಇದೀಗ ಈ ಪ್ರಮಾಣ 208 ಗಿಗಾ ವ್ಯಾಟ್ ಗೆ ಏರಿಕೆಯಾಗಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ದೇಶೀಯ ಉತ್ಪಾದಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. 2032ರ ವೇಳೆಗೆ ಭಾರತದ ಇಂಧನ ಬೇಡಿಕೆ ದ್ವಿಗುಣವಾಗಲಿದ್ದು, ಅದಕ್ಕೆ ಪೂರಕವಾಗಿ ವಿದ್ಯುತ್ ಉತ್ಪಾದನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ ಹೇಳಿದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ವ್ಯವಸ್ಥೆ ಉತ್ಪಾದಕರ ಸಂಘ-KRESMA ಹಾಗೂ ಬಿಜೆಪಿ ವ್ಯಾಪಾರ ಮತ್ತು ವಾಣಿಜ್ಯ ಘಟಕ ವತಿಯಿಂದ ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ ಕುರಿತ ಸಂವಾದ ಮತ್ತು ಜಾಗೃತಿ ಕಾರ್ಯಕ್ರಮವನ್ನು ಕೇಂದ್ರ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ದಾದ್ ಜೋಶಿ ಉದ್ಘಾಟಿಸಿದರು. ಈ ವೇಳೆ ಕೈಪಿಡಿ, ಭಿತ್ತಿಪತ್ರ ಹಾಗೂ ಪುಸ್ತಕ ಬಿಡುಗಡೆ ಮಾಡಿದರು.
ದೇಶದಲ್ಲಿ ಪಿಎಂ ಸೂರ್ಯಘರ್ ಯೋಜನೆಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಛಾವಣಿ ಮೇಲೆ ವಿದ್ಯುತ್ ಉತ್ಪಾದಿಸುವ ಯೋಜನೆ ಇದಾಗಿದ್ದು, ಈ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನವೀಕರಿಸಬಹುದಾದ ಇಂಧನ ಉತ್ಪಾದನೆಗೆ ಒತ್ತು ನೀಡಿದೆ. ದೇಶದ ಒಟ್ಟಾರೆ ವಿದ್ಯುತ್ ನಲ್ಲಿ ಶೇಕಡ 44ರಷ್ಟು ನವೀಕರಿಸಬಹುದಾದ ಇಂಧನ ಮೂಲವಿದ್ದು, ಕೆಲವೇ ವರ್ಷದಲ್ಲಿ ಈ ಪ್ರಮಾಣ ಶೇಕಡ 50 ದಾಟಲಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ಈ ಸಂದರ್ಭದಲ್ಲಿ KRESMA ಸಂಸ್ಥಾಪಕ ಅಧ್ಯಕ್ಷ ರಮೇಶ್ ಶಿವಣ್ಣ, ಅಧ್ಯಕ್ಷ ಸುರೇಂದ್ರ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಏ 10 ರಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಂಡು ಏ 18ರ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490
ಯಾವುದೇ ಕಾರಣಕ್ಕೂ ಬಗರ್ ಹುಕುಂ ರೈತರನ್ನು ಒಕ್ಕಲೆಬ್ಬಿಸದಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕೇಂದ್ರ…
ದ್ವೀತಿಯ ಪಿಯುಸಿ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟಗೊಂಡಿದೆ. ಇದೇ 24 ರಿಂದ…
ಕರ್ನಾಟಕದ ಒಳನಾಡಿನಲ್ಲಿ ಮುಂದಿನ 5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2 ರಿಂದ 3…
ಸುಳ್ಯ ಪ್ರದೇಶದ ಕೆಲವು ಕಡೆ ಮಂಗಳವಾರ ಸಂಜೆ ಮೋಡದ ಅಪರೂಪದ ವಿದ್ಯಮಾನ ಆಗಸ…