ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಇಂದು ರೈತರ ಖಾತೆಗೆ 20 ನೇ ಕಂತಿನ ಹಣವನ್ನು ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಜೊತೆ ವಿಡಿಯೋ ಕಾನ್ಸರೆನ್ಸ್ ಮೂಲಕ ನೇರ ಸಂವಾದ ಕಾರ್ಯಕ್ರಮವನ್ನು ಬೆಳಗ್ಗೆ10 ಗಂಟೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ವಿಡಿಯೋ ಕಾನ್ಸರೆನ್ಸ್ ಮೂಲಕ ನೇರ ಪ್ರಸಾರ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಡಾ. ಕೆ.ಸುಧಾಕರ್ ಮತ್ತು ಜಿಲ್ಲೆಯ ನಾಲ್ಕು ತಾಲೂಕುಗಳ ಶಾಸಕರು, ಜಿಲ್ಲೆಯ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಬಿ.ಜಿ.ಹನುಮಂತರಾಯ ತಿಳಿಸಿದ್ದಾರೆ.
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…