ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ | ಉಡುಪಿಯ 1,50,593 ರೈತರಿಗೆ ಅನುದಾನ ಬಿಡುಗಡೆ | ಶೋಭಾ ಕರಂದ್ಲಾಜೆ ಮಾಹಿತಿ

October 14, 2022
3:25 PM

ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್‌ ಸಂಖ್ಯೆಯೊಂದಿಗೆ ಮೊಬೈಲ್‌ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್‌ ಸೈಟ್‌ಗೆ ಭೇಟಿ ನೀಡಿ ಆಧಾರ್‌ ನಂಬರ್‌, ಮೊಬೈಲ್‌ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror