ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಜಿಲ್ಲೆಯಲ್ಲಿ 1,50,593 ರೈತರಿಗೆ 258.99 ಕೋ.ರೂ. ಕೇಂದ್ರ ಸರ್ಕಾರದ ಅನುದಾನ ಹಾಗೂ 127.24 ಕೋ. ರೂ. ರಾಜ್ಯ ಸರಕಾರದ ಅನುದಾನ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಈ ಯೋಜನೆಯ ಮುಂದಿನ ಕಂತು ಪಡೆಯಬೇಕಾದರೆ ಇ-ಕೆವೈಸಿ ಕಡ್ಡಾಯವಾಗಿರುತ್ತದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಈ ಯೋಜನೆಯ ಹಣ ಬಿಡುಗಡೆ ಆಗುವುದಿಲ್ಲ. ಜಿಲ್ಲೆಯಲ್ಲಿ ಈ ಯೋಜನೆಯ ನೆರವು ಪಡೆಯುತ್ತಿರುವ ಶೇ.72 ರಷ್ಟು ಅಂದರೆ 1,09,191 ರೈತರು ಮಾತ್ರ ಇ ಕೆವೈಸಿ ಮಾಡಿಸಿಕೊಂಡಿದ್ದಾರೆ. ಶೇ. 28ರಷ್ಟು 43,365 ರೈತರು ಇ- ಕೆವೈಸಿ ಮಾಡಿಸಿಕೊಂಡಿರುವುದಿಲ್ಲ. ಆಧಾರ್ ಸಂಖ್ಯೆಯೊಂದಿಗೆ ಮೊಬೈಲ್ ಸಂಖ್ಯೆ ಜೋಡಿಸಿಕೊಂಡಿರುವ ರೈತರು https://pmkisan.gov.in ವೆಬ್ ಸೈಟ್‌ಗೆ ಭೇಟಿ ನೀಡಿ ಆಧಾರ್ ನಂಬರ್, ಮೊಬೈಲ್ ಒಟಿಪಿ ದಾಖಲಿಸಿ ಇ ಕೆವೈಸಿ ಮಾಡಿಸಿಕೊಳ್ಳಬಹುದು ಎಂದರು.
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…