13 ನೇ ಕಂತಿನ ಪಿ.ಎಂ ಕಿಸಾನ್ ಹಣ ರೈತರ ಖಾತೆಗೆ ಇನ್ನು ಕೆಲವೇ ಗಂಟೆಗಳಲ್ಲಿ ಖಾತೆಗೆ ಜಮಾ ಆಗಲಿದೆ. ಈ ಬಾರಿ ಕರ್ನಾಟಕದ ಬೆಳಗಾವಿಯಿಂದಲೇ ರಾಷ್ಟ್ರದ ಜನರ ಖಾತೆಗೆ ಬಿಡುಗಡೆ ಆಗಲಿದೆ.
ಕೇಂದ್ರ ಸರ್ಕಾರವು ರೈತರ ಕಲ್ಯಾಣ ನಿಟ್ಟಿನಲ್ಲಿ ತಮ್ಮ ಬದ್ಧತೆಯನ್ನು ಪ್ರದರ್ಶಿಸುವ ಮತ್ತೊಂದು ಕ್ರಮವಾಗಿ ಪ್ರಧಾನಮಂತ್ರಿ ಅವರು, ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ-ಕಿಸಾನ್)ಅನ್ನು ಪರಿಚಯಿಸಿದ್ದಾರೆ. ಇನ್ನು ಪಿ.ಎಂ ಕಿಸಾನ್‌ನ 13ನೇ ಕಂತಿನ 16,000 ಕೋಟಿ ರೂ.ಗಳನ್ನು 8 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಹಣ ಬಿಡುಗಡೆ ಮಾಡಲಿದ್ದಾರೆ.
ಈ ಯೋಜನೆಯಡಿ ಅರ್ಹ ರೈತ ಕುಟುಂಬಗಳಿಗೆ ಪ್ರತಿ ವರ್ಷ ತಲಾ 2000 ರೂ.ನಂತೆ ಮೂರು ಸಮಾನ ಕಂತುಗಳಲ್ಲಿ 6000 ರೂ. ಧನ ಸಹಾಯ ಮಾಡಲಾಗುವುದು. ಫೆಬ್ರವರಿ 27 ರಂದು ಬೆಳಗಾವಿಯ ಮಾಲಿನಿ ಸಿಟಿಯಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ದೇಶದ ರೈತರ ಖಾತೆಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಪಿಎಂ ಕಿಸಾನ್ 13ನೇ ಕಂತಿನ ಹಣವನ್ನು ವರ್ಗಾಯಿಸಲಿದ್ದಾರೆ.
ಅದರ ನಂತರ, ಮಧ್ಯಾಹ್ನ 3:15 ರ ಸುಮಾರಿಗೆ, ಬೆಳಗಾವಿಯಲ್ಲಿ ಶಂಕುಸ್ಥಾಪನೆ ಮತ್ತು ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಸಮರ್ಪಿಸಲಿದ್ದಾರೆ. ಹಾಗೆ ಪಿಎಂ-ಕಿಸಾನ್‌ನ 13 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ರೈತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಅಡಿಯಲ್ಲಿ ಪ್ರಧಾನಿಯವರು, 16,000 ಕೋಟಿಗಳನ್ನು 8 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡಲಿದ್ದಾರೆ.
ಯೋಜನೆಯಡಿ, ಅರ್ಹ ರೈತ ಕುಟುಂಬಗಳಿಗೆ ರೂ. 6000 ವರ್ಷಕ್ಕೆ ಮೂರು ಸಮಾನ ಕಂತುಗಳಲ್ಲಿ ತಲಾ ರೂ. 2000. ನೀಡಲಾಗುತ್ತದೆ.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…