ಸೌರ ಪಂಪ್‌ಗಳ ಬಳಕೆಯಿಂದ ರೈತರ ಆದಾಯ ದ್ವಿಗುಣ

January 12, 2026
7:11 AM
ಪಿಎಂ ಕುಸುಮ್ ಯೋಜನೆಯಿಂದ ರೈತರ ನೀರಾವರಿ ವೆಚ್ಚ ಕಡಿತ, ಸೌರ ಪಂಪ್ ಬಳಕೆ ಹಾಗೂ ಹೆಚ್ಚುವರಿ ವಿದ್ಯುತ್ ಮಾರಾಟದ ಮೂಲಕ ಆದಾಯ ವೃದ್ಧಿ ಸಾಧ್ಯ ಎಂದು ಹರಿಹರ ಶಾಸಕ ಬಿ.ಪಿ. ಹರೀಶ್ ಹೇಳಿದ್ದಾರೆ.

ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್‌ಗಳ ಬದಲಿಗೆ ಸೌರ ಪಂಪ್‌ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.

ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.

ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್‌ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರೈತರ ಬದುಕು ಉಳಿಸಲು ಭಾರತದಲ್ಲಿ ಹವಾಮಾನ–ಸ್ಥಿತಿಸ್ಥಾಪಕ ಕೃಷಿ ಅನಿವಾರ್ಯ
January 12, 2026
7:40 AM
by: ದ ರೂರಲ್ ಮಿರರ್.ಕಾಂ
ರಾಷ್ಟ್ರೀಯ ರೈತ ದಿನಾಚರಣೆ ವಿಜೃಂಭಣೆ | ಕೃಷಿ ಕ್ಷೇತ್ರದ ಸಾಧಕರಿಗೆ ಸನ್ಮಾನ
January 12, 2026
7:22 AM
by: ದ ರೂರಲ್ ಮಿರರ್.ಕಾಂ
ಸಾವಯವ ಕೃಷಿ ಇಂದಿನ ಅವಶ್ಯಕತೆ : ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್
January 12, 2026
7:17 AM
by: ದ ರೂರಲ್ ಮಿರರ್.ಕಾಂ
ಬ್ರಹ್ಮಾವರ ಸರ್ಕಾರಿ ಡಿಪ್ಲೋಮಾ ಕೃಷಿ ಕಾಲೇಜು ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧಾರ
January 12, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror