ರೈತರ ನೀರಾವರಿ ವೆಚ್ಚ ಕಡಿತಗೊಳಿಸುವುದು ಹಾಗೂ ಡೀಸೆಲ್ ಪಂಪ್‌ಗಳ ಬದಲಿಗೆ ಸೌರ ಪಂಪ್‌ಗಳನ್ನು ಪ್ರೋತ್ಸಾಹಿಸುವುದು ಪ್ರಧಾನಮಂತ್ರಿ ಕುಸುಮ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ಬಿ.ಪಿ. ಹರೀಶ್ ತಿಳಿಸಿದ್ದಾರೆ.
ಹರಿಹರ ತಾಲೂಕಿನ ಜಿಗಳಿ ಗ್ರಾಮದಲ್ಲಿ ಪಿಎಂ ಕುಸುಮ್ ಯೋಜನೆಯಡಿ ನಿರ್ಮಾಣಗೊಂಡ ಸೌರ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ರೈತರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರ ಹಲವು ಮಹತ್ವದ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಇವುಗಳ ಮೂಲಕ ರೈತರು ಆದಾಯ ದ್ವಿಗುಣಗೊಳಿಸಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಹೇಳಿದರು.
ಪಿಎಂ ಕುಸುಮ್ ಯೋಜನೆಯಡಿ ರೈತರು ಉತ್ಪಾದಿಸುವ ಹೆಚ್ಚುವರಿ ಸೌರ ವಿದ್ಯುತ್‌ನ್ನು ಸರ್ಕಾರಕ್ಕೆ ಮಾರಾಟ ಮಾಡುವ ಮೂಲಕ ಆದಾಯ ಹೆಚ್ಚಿಸಿಕೊಳ್ಳಬಹುದು. ಜೊತೆಗೆ ಕಾರ್ಬನ್ ಹೊರಸೂಸುವಿಕೆ ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಸಹಕಾರ ನೀಡುವುದು ಈ ಯೋಜನೆಯ ಮತ್ತೊಂದು ಪ್ರಮುಖ ಉದ್ದೇಶವಾಗಿದೆ ಎಂದು ಶಾಸಕ ಬಿ.ಪಿ. ಹರೀಶ್ ತಿಳಿಸಿದರು.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…