ಮೋದಿ ಸರ್ಕಾರವು ಮುಂದಿನ ಒಂದೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ 10 ಲಕ್ಷ ಜನರನ್ನು ನೇಮಿಸಿಕೊಳ್ಳಲಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ. ಮಿಷನ್ ಮೋಡ್‌ನಲ್ಲಿ ನೇಮಕಾತಿಯನ್ನು ಪ್ರಾರಂಭಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಿಗೆ ನಿರ್ದೇಶನ ನೀಡಿದ್ದಾರೆ.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೇ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲಗಳ ಸ್ಥಿತಿಯನ್ನು ಪರಿಶೀಲಿಸಿದ್ದಾರೆ ಮತ್ತು ಮುಂದಿನ 1.5 ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ
ಈ ಹಿಂದೆ ಏಪ್ರಿಲ್‌ನಲ್ಲಿ, ಪಿಎಂ ಮೋದಿ ಅವರು ಉನ್ನತ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ, ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆಗೆ ಆದ್ಯತೆ ನೀಡುವಂತೆ ಕೇಳಿಕೊಂಡಿದ್ದರು ಇದರಿಂದ ಅವಕಾಶಗಳು ಸೃಷ್ಟಿಯಾಗುತ್ತವೆ. ಫೆಬ್ರವರಿಯಲ್ಲಿ ರಾಜ್ಯಸಭೆಯಲ್ಲಿ ಮಂಡಿಸಲಾದ ಸರ್ಕಾರದ ಅಂಕಿಅಂಶಗಳ ಪ್ರಕಾರ, ಮಾರ್ಚ್ 1, 2020 ರವರೆಗೆ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ 87 ಲಕ್ಷ ಹುದ್ದೆಗಳು ಖಾಲಿ ಇವೆ.
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…
ʼಕಾಯಕ ಗ್ರಾಮʼ ಯೋಜನೆಯಡಿ ಹಿಂದುಳಿ ದಿರುವ ಗ್ರಾಮ ಪಂಚಾಯತಿಯನ್ನು ದತ್ತು ಸ್ವೀಕಾರ ಮಾಡಬೇಕೆಂದು…
ಡೆಂಗ್ಯೂ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ದೃಷ್ಟಿಯಿಂದ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲು…