ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 23 (ಭಾನುವಾರ)ರಂದು ಉತ್ತರ ಪ್ರದೇಶದ ಅಯೋಧ್ಯೆಗೆ ಭೇಟಿ ನೀಡಲಿದ್ದು, ಅಲ್ಲಿಯೇ ದೀಪಾವಳಿ ಹಬ್ಬ ಆಚರಿಸಲಿದ್ದಾರೆ. ಶ್ರೀರಾಮ ಜನ್ಮಭೂಮಿಯ ರಾಮಮಂದಿರದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಅಕ್ಟೋಬರ್ 24ರಿಂದ ದೀಪಾವಳಿ ಆಚರಣೆ ಪ್ರಾರಂಭವಾಗಲಿದ್ದು, ಅದಕ್ಕೂ ಒಂದು ದಿನ ಮುಂಚಿತವಾಗಿ ಅ.23ರಿಂದ ಅಯೋಧ್ಯೆಯಲ್ಲಿ ಮೂರು ದಿನಗಳ ದೀಪೋತ್ಸವ ಪ್ರಾರಂಭವಾಗುತ್ತದೆ.
ಪ್ರಧಾನಿ ಮೋದಿ ಅಲ್ಲಿಗೆ ಭೇಟಿ ಕೊಟ್ಟು, ಬೆಳಗ್ಗೆಯಿಂದ ಸಂಜೆಯವರೆಗೆ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಈ ನಿಟ್ಟಿನಲ್ಲಿ ಅಯೋಧ್ಯೆಯಲ್ಲಿ ಕಟ್ಟುನಿಟ್ಟಿನ ಭದ್ರತೆ ಒದಗಿಸಲಾಗಿದೆ.ಭಾನುವಾರ ಸಂಜೆ 5ಗಂಟೆ ಹೊತ್ತಿಗೆ ಪ್ರಧಾನಿ ನರೇಂದ್ರ ಮೋದಿ ಅಯೋಧ್ಯೆ ಶ್ರೀರಾಮ ಜನ್ಮಭೂಮಿಗೆ ತೆರಳಿ, ಅಲ್ಲಿ ರಾಮಲಲ್ಲಾಂಗೆ ಪೂಜೆ ಸಲ್ಲಿಸುವರು.
ಬಳಿಕ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಪ್ರವಾಸಿ ತಾಣವನ್ನೂ ಅವರು ಪರಿಶೀಲನೆ ಮಾಡುವರು. 5.40ರ ಹೊತ್ತಿಗೆ ಶ್ರೀ ರಾಮ ಕಥಾ ಪಾರ್ಕ್ನಲ್ಲಿ ನಡೆಯಲಿರುವ ಶ್ರೀರಾಮ ರಾಜ್ಯಾಭಿಷೇಕ ಕಾರ್ಯಕ್ರಮ ವೀಕ್ಷಿಸುವರು. ಬಳಿಕ 6.30ಕ್ಕೆ ಸರಯೂ ಘಾಟ್ನಲ್ಲಿ ಜರುಗುವ ಆರತಿಯಲ್ಲಿ ಪಾಲ್ಗೊಳ್ಳುವರು. ಬಳಿಕ 6.40ಕ್ಕೆ ರಾಮ್ ಕಿ ಪೌಡಿ ಘಾಟ್ನಲ್ಲಿ ನಡೆಯುವ ದೀಪೋತ್ಸವದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.ಈ ಸಮಯದಲ್ಲಿ ಡಿಜಿಟಲ್ ಪಟಾಕಿ ಸಿಡಿಯಲಿದೆ. ಬುಧವಾರ (ಅ.26) ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಅಲ್ಲಿಗೆ ತೆರಳಲಿದ್ದಾರೆ.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…