ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳ ಅಂತರ್ ಸಚಿವಾಲಯದ ಉನ್ನತ ಮಟ್ಟದ ಪ್ರಗತಿ ಪರಿಶೀಲನಾ ಸಭೆ ದೆಹಲಿಯಲ್ಲಿ ನಡೆಯಿತು.ನಾಗರಿಕ ರಕ್ಷಣಾ ಕಾರ್ಯ ವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ, ವದಂತಿಗಳನ್ನು ಎದುರಿಸುವುದು, ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಸಂಪುಟ ಕಾರ್ಯದರ್ಶಿ, ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳು ಮತ್ತು ರಕ್ಷಣಾ, ಗೃಹ ವ್ಯವಹಾರ, ವಿದೇಶಾಂಗ ವ್ಯವಹಾರ, ಮಾಹಿತಿ ಮತ್ತು ಪ್ರಸಾರ, ವಿದ್ಯುತ್, ಆರೋಗ್ಯ ಮತ್ತು ದೂರಸಂಪರ್ಕ ಸೇರಿದಂತೆ ಪ್ರಮುಖ ಸಚಿವಾಲಯಗಳ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.
ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಸಚಿವಾಲಯಗಳು ರೂಪಿಸಿರುವ ಯೋಜನೆಗಳು ಮತ್ತು ಸಿದ್ಧತೆಗಳ ಬಗ್ಗೆ ಪ್ರಧಾನಿ ಪರಿಶೀಲನೆ ನಡೆಸಿದರು. ನಾಗರಿಕ ರಕ್ಷಣಾ ಕಾರ್ಯ ವಿಧಾನಗಳನ್ನು ಬಲಪಡಿಸುವುದು, ತಪ್ಪು ಮಾಹಿತಿ, ವದಂತಿಗಳನ್ನು ಎದುರಿಸುವುದು, ನಿರ್ಣಾಯಕ ಮೂಲಸೌಕರ್ಯಗಳ ಸುರಕ್ಷತೆಯನ್ನು ಖಚಿತಪಡಿಸುವುದು ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. ದೇಶವು ಸೂಕ್ಷ್ಮ ದಿನಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ನಿರಂತರ ಜಾಗರೂಕತೆ ಮತ್ತು ಅಂತರ್ ಸಚಿವಾಲಯಗಳ ನಡುವೆ ನಿಖರ ಸಂವಹನಕ್ಕೆ ಪ್ರಧಾನಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಇದೇ ವೇಳೆ, ರಾಷ್ಟ್ರೀಯ ಭದ್ರತೆ, ಕಾರ್ಯಾಚರಣೆಯ ಸನ್ನದ್ಧತೆ ಮತ್ತು ನಾಗರಿಕ ಸುರಕ್ಷತೆಗೆ ಸರ್ಕಾರ ಬದ್ಧವಾಗಿರುವುದಾಗಿ ತಿಳಿಸಿದರು.