ನವದೆಹಲಿಯಲ್ಲಿ ನಿರ್ಮಾಣವಾಗಿರುವ ಪ್ರಜಾಪ್ರಭುತ್ವದ ನೂತನ ದೇಗುಲ ಸಂಸತ್ ಭವನವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು.
Advertisement
ಇಂದು ಬೆಳಗ್ಗೆ 7.15 ಕ್ಕೆ ಸಾಂಪ್ರದಾಯಿಕ ಬಿಳಿ ಉಡುಗೆಯಲ್ಲಿ ಪ್ರಧಾನಿ ಮೋದಿ ಆಗಮಿಸಿದರು. ಶೃಂಗೇರಿ ಮಠದ ಪುರೋಹಿತರು ವೇದ ಘೋಷಗಳನ್ನು ಪಠಿಸಿದರು. ಹೊಸ ಸಂಸತ್ ಭವನದಲ್ಲಿ ಗಣಪತಿ ಹವನ ನಡೆಸಲಾಯಿತು.ಪೂಜಾ ವಿಧಾನಗಳು ಮುಗಿದ ಬಳಿಕ “ಸೆಂಗೋಲ್” ಅನ್ನು ಲೋಕಸಭೆಯ ಸಭಾಂಗಣದಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ನಿಗದಿಪಡಿಸಲಾಗಿದ್ದ ವಿಶೇಷ ಆವರಣದಲ್ಲಿ ರಾಜದಂಡವನ್ನು ಸ್ಪೀಕರ್ ಓಂ ಬಿರ್ಲಾ ಅವರ ಸಮೇತ ತೆರಳಿ ಅಲ್ಲಿ ಪ್ರತಿಷ್ಠಾಪಿಸಿದರು. ಇದಾದ ಬಳಿಕ ಸರ್ವಧರ್ಮ ಸಮ್ಮಿಲನ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಭಾಗವಹಿಸಿದರು.ಹಿಂದೂ, ಮುಸ್ಲಿಂ, ಜೈನ, ಬೌದ್ಧ, ಕ್ರೈಸ್ತ ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement