ಉತ್ತರ ಪ್ರದೇಶ ಹೂಡಿಕೆದಾರರ ಶೃಂಗಸಭೆಯ ಶಿಲಾನ್ಯಾಸ ಸಮಾರಂಭ ಶುಕ್ರವಾರ ಲಕ್ನೋದಲ್ಲಿ ನಡೆಯಿತು. ಕಾರ್ಯಕಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ಸಂದರ್ಭ 80,000 ಕೋಟಿ ರೂ.ಗೂ ಹೆಚ್ಚು ಮೊತ್ತದ 1,406 ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಈ ಹೂಡಿಕೆಯು ಉತ್ತರ ಪ್ರದೇಶದಲ್ಲಿ 5 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆಯಿದೆ.
ಈ ಯೋಜನೆಗಳಲ್ಲಿ ಯೋಜನೆಗಳು ಕೃಷಿ , ಐಟಿ ಮತ್ತು ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ, ಫಾರ್ಮಾ, ಪ್ರವಾಸೋದ್ಯಮ, ರಕ್ಷಣಾ ಮತ್ತು ಏರೋಸ್ಪೇಸ್, ಕೈಮಗ್ಗ ಮತ್ತು ಜವಳಿ ಮುಂತಾದ ವಲಯಗಳನ್ನು ಒಳಗೊಂಡಿದೆ.
ಮೊದಲ ಯುಪಿ ಹೂಡಿಕೆದಾರರ ಶೃಂಗಸಭೆಯನ್ನು 2018 ರಲ್ಲಿ ಮತ್ತು ಎರಡನೆಯದು 2019 ರಲ್ಲಿ ನಡೆಸಲಾಯಿತು. ಮೊದಲ ಶೃಂಗಸಭೆಯಲ್ಲಿ, 61,500 ಕೋಟಿ ರೂಪಾಯಿಗಿಂತ ಹೆಚ್ಚು ಮೌಲ್ಯದ 81 ಯೋಜನೆಗಳನ್ನು ಪ್ರಾರಂಭಿಸಲಾಯಿತು.ಎರಡನೇ ಶೃಂಗಸಭೆಯಲ್ಲಿ 67,000 ಕೋಟಿ ರೂಪಾಯಿಗಿಂತ ಹೆಚ್ಚಿನ ಹೂಡಿಕೆಯೊಂದಿಗೆ 290 ಯೋಜನೆಗಳನ್ನು ಪ್ರಾರಂಭಿಸಲಾಯಿತು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…