ಪಂಚರಾಜ್ಯ ಚುನಾವಣೆ | ಗುಜರಾತ್​ಗೆ ಇಂದು ಪ್ರಧಾನಿ ಮೋದಿ ಭೇಟಿ | ರೋಡ್​ ಶೋನಲ್ಲಿ ಭಾಗಿ

March 11, 2022
9:30 AM

ಪ್ರಧಾನಿ ಮೋದಿ ಅವರು ಇಂದು ಗುಜರಾತ್​ಗೆ ಭೇಟಿ ನೀಡಲಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೋಬಾದ ಕಮಲಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ರೋಡ್​ ಶೋ ನಡೆಸಲಿದ್ದಾರೆ.

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಮಣಿಪುರ ರಾಜ್ಯಗಳಲ್ಲಿ ಬಿಜೆಪಿಯ ಭರ್ಜರಿ ಜಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರ ಗಮನ ಗುಜರಾತ್ ವಿಧಾನಸಭೆ ಚುನಾವಣೆಯ ಮೇಲೆ ಕೇಂದ್ರೀಕೃತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಗುಜರಾತ್​ಗೆ ಭೇಟಿ ನೀಡಲಿದ್ದಾರೆ.

ಇಂದು ಮೋದಿ ಅವರು ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 10 ಗಂಟೆಗೆ ಆಗಮಿಸಲಿದ್ದು, ಅವರನ್ನು ಗುಜರಾತ್‌ನ ಬಿಜೆಪಿ ನಾಯಕರು ಸ್ವಾಗತಿಸಲಿದ್ದಾರೆ. ನಂತರ ಬೆಳಗ್ಗೆ 10.15ಕ್ಕೆ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಕೋಬಾದ ಕಮಲಂನಲ್ಲಿರುವ ಬಿಜೆಪಿ ರಾಜ್ಯ ಕಚೇರಿವರೆಗೆ ಪ್ರಧಾನಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋನಲ್ಲಿ ಸುಮಾರು 4 ಲಕ್ಷ ಜನರು ಸೇರುವ ಸಾಧ್ಯತೆ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror