ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಪ್ರಸ್ತಾಪಿಸಿದ್ದಾರೆ.
ಬಾಗಲಕೋಟೆಯ ನಿವಾಸಿ ಶ್ರೀಶೈಲ್ ತೇಲಿ ಅವರು 35 ಡಿಗ್ರಿಗಿಂತ ಅಧಿಕ ತಾಪಮಾನವಿರುವ ಬಯಲು ಪ್ರದೇಶದಲ್ಲಿ ಸೇಬು ಬೆಳೆದಿರುವ ಕುರಿತು ಅಚ್ಚರಿ ವ್ಯಕ್ತಪಡಿಸಿದ್ದಾರೆ. ರೈತ ಶ್ರೀಶೈಲ ತೇಲಿ ತಮ್ಮ ಏಳು ಎಕರೆ ಜಮೀನಿನಲ್ಲಿ ಸಾವಯವ ವಿಧಾನದಿಂದ ಸೇಬು ಬೆಳೆದು ಅವರು ಲಕ್ಷಾಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ. ಈ ಯಶಸ್ಸಿನಿಂದ ಇತರ ರೈತರಿಗೆ ಸ್ಪೂರ್ತಿಯಾಗಿದ್ದು, ಸೇಬು ಕೃಷಿಯ ಬಗ್ಗೆ ಅವರು ಜಾಗೃತಿ ಮೂಡಿಸುತ್ತಿದ್ದಾರೆ. ಕಬ್ಬು ಹೆಚ್ಚಾಗಿ ಬೆಳೆಯುವ ಈ ನಾಡಲ್ಲಿ ಸಮೃದ್ಧವಾಗಿ ಸೇಬು ಬೆಳೆದು ಜನರಿಗೆ ಸೇಬಿನ ಸಿಹಿ ಹಂಚುತ್ತಿದ್ದಾರೆ. ಬಾಗಲಕೋಟೆ, ಬೆಳಗಾವಿ, ವಿಜಯಪುರದ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ ಕೈ ತುಂಬ ಆದಾಯ ಪಡೆಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿರುವ ಬಗ್ಗೆ ಆಕಾಶವಾಣಿಯೊಂದಿಗೆ ಶ್ರೀಶೈಲ ತೇಲಿ ಸಂತಸ ಹಂಚಿಕೊಂಡಿದ್ದಾರೆ.