ಪುತ್ತೂರಿನ ಎರಡು ಗೇರು ತಳಿಗಳಿಗೆ ರಾಷ್ಟ್ರಮಟ್ಟದ ಮನ್ನಣೆ ಭಾಗ್ಯ : ತಳಿ ಬಿಡುಗಡೆಗೊಳಿಸಲಿದ್ದಾರೆ ಪ್ರಧಾನಿ ಮೋದಿ

August 10, 2024
11:09 AM

ಪುತ್ತೂರಿನ(Puttur) ರಾಷ್ಟ್ರೀಯ ಗೇರು ಸಂಶೋಧನಾ ಕೇಂದ್ರದ (National cashew research center) ಎರಡು ಸುಧಾರಿತ ಗೇರು ಹೈಬ್ರಿಡ್ ತಳಿಗಳಾದ ನೇತ್ರಾ ಜಂಬೋ-1(Netra jambo-1 ಮತ್ತು ನೇತ್ರಾ ಗಂಗಾ(Netra ganga) ತಳಿಗಳು ರಾಷ್ಟ್ರ ಮಟ್ಟದಲ್ಲಿ ತಮ್ಮ ಅಸ್ತಿತ್ವವನ್ನು ಕಂಡುಕೊಳ್ಳಲಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi) ಅವರಿಂದ ಆಗಸ್ಟ್ ಎರಡನೇ ವಾರ ವಿವಿಧ ವಾರ್ಷಿಕ ಹಾಗೂ ತೋಟಗಾರಿಕಾ ಬೆಳೆಗಳಲ್ಲಿ ಒಟ್ಟು 109 ಸುಧಾರಿತ, ಹವಾಮಾನ ಬದಲಾವಣೆಗೆ ಸ್ಪಂದಿಸುವ, ಪೋಷಕಾಂಶ ಸಮೃದ್ಧ ತಳಿಗಳು ಲೋಕಾರ್ಪಣೆಗೊಳ್ಳಲಿವೆ ಎಂದು ಪ್ರಕಟಣೆ ತಿಳಿಸಿದೆ.

Advertisement

ಇದು ಕೇಂದ್ರ ಸರ್ಕಾರ 100 ದಿನಗಳನ್ನು ಪೂರೈಸುತ್ತಿರುವ ಹೊತ್ತಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಅಂಗವಾಗಿದೆ. ಈ ವಿಶೇಷ ಸಂದರ್ಭದಲ್ಲಿ ಸೇರಿಕೊಂಡಿವೆ. ನೇತ್ರಾ ಜಂಬೋ-1 ತಳಿಯನ್ನು ಸಂಸ್ಥೆಯ ಈಗಿನ ನಿರ್ದೇಶಕರಾದ ಡಾ.ದಿನಕರ ಅಡಿಗ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಈ ತಳಿ ಕೂಲಿ ಖರ್ಚನ್ನು ಗಮನಾರ್ಹ ಪ್ರಮಾಣದಲ್ಲಿ ಉಳಿಸುತ್ತದೆ. ಇದರಲ್ಲಿ 12 ಗ್ರಾಂ ತೂಕದ ಬೀಜಗಳಿರುತ್ತವೆ. ಶೇಕಡಾ 90ಕ್ಕೂ ಹೆಚ್ಚಿನ ಬೀಜಗಳದ್ದು ಒಂದೇ ಗಾತ್ರ. ನೂರು ಕೆಜಿ ಬೀಜ ಸಂಸ್ಕರಣೆಯಿಂದ ಸುಮಾರು 29 ರಿಂದ 30 ಕೆಜಿ ತಿರುಳು ಸಿಗುತ್ತದೆ. ಈಗಿರುವ ರಫ್ತು ಗುಣಮಟ್ಟದ ಗ್ರೇಡ್ ಡಬ್ಲ್ಯೂ 180ಕ್ಕಿಂತ ಜಾಸ್ತಿ ಗ್ರೇಡ್ (ಡಬ್ಲ್ಯೂ 130) ಈ ತಳಿಯ ತಿರುಳಿನದ್ದು ಆಗಿದೆ.

Cashew

ಈಗಿನ ಮಾರುಕಟ್ಟೆ ದರದಲ್ಲಿ ದೊಡ್ಡ ಗಾತ್ರದ ಬೀಜಕ್ಕೆ ಒಂದು ಟನ್ನಿಗೆ ಸುಮಾರು 10,000 ರೂ ಜಾಸ್ತಿ ಸಿಗುತ್ತದೆ. ಒಟ್ಟು 26000 ರೂ. ಗಳಷ್ಟು ಹೆಚ್ಚುವರಿ ಲಾಭ ಒಂದು ಟನ್ನಿಗೆ ಸಿಗುತ್ತದೆ. ಇದರ ತಿರುಳಿನ ಸಿಪ್ಪೆ ಸುಲಭದಲ್ಲಿ ಬಿಡಿಸಬಹುದು. ಹಾಗಾಗಿ ಕಾರ್ಖಾನೆಯಲ್ಲೂ ಕೂಲಿ ಖರ್ಚು ಉಳಿಸುತ್ತದೆ. ಜೊತೆಗೆ ತಿರುಳು ತುಂಬಾ ರುಚಿಕರವಾಗಿದೆ ಎಂಬುದು ತಿಳಿದುಬಂದಿದೆ.

ನೇತ್ರಾ ಗಂಗಾ ತಳಿಯನ್ನು ಹಿಂದಿನ ಪ್ರಭಾರ ನಿರ್ದೇಶಕರಾದ ಡಾ.ಗಂಗಾಧರ ನಾಯಕ್ ಮತ್ತವರ ತಂಡ ಅಭಿವೃದ್ಧಿಪಡಿಸಿದೆ. ಇದು ದೊಡ್ಡ ಗಾತ್ರದ ಬೀಜವನ್ನು (12 ರಿಂದ 13 ಗ್ರಾಂ), ಗೊಂಚಲುಗಳಲ್ಲಿ ಬಿಡುವ ತಳಿಯಾಗಿದ್ದು ಉತ್ತಮ ಫಸಲನ್ನು ಕೊಡುತ್ತದೆ. ಪ್ರಾರಂಭದ ಒಂದೆರಡು ವರ್ಷಗಳಲ್ಲೇ ಹೂ ಬಿಡುವ ಹಾಗೂ ದೀರ್ಘಾವಧಿ (ಡಿಸೆಂಬರ್ ನಿಂದ ಏಪ್ರಿಲ್ ತನಕ) ಹೂವು ಮತ್ತು ಗೇರು ಬೀಜ ಬಿಡುವ ತಳಿ. ತಿರುಳಿನ ಪ್ರಮಾಣ ಶೇಕಡಾ 29.5% ಇರುತ್ತದೆ. ಮೂರನೆ ವರ್ಷದಲ್ಲಿಯೇ ಗಿಡವೊಂದಕ್ಕೆ 5 ಕೆಜಿಗಿಂತ ಮೇಲ್ಪಟ್ಟು ಇಳುವರಿ ಕೊಡುತ್ತದೆ. ಗೇರಿನಲ್ಲಿ ಸದ್ಯ ಕೃಷಿ ಮಾಡುತ್ತಿರುವ ತಳಿಗಳು (ಭಾಸ್ಕರ, ವಿಆರ್​ಐ-3, ಉಳ್ಳಾಲ -3 ಇತ್ಯಾದಿ) ಬಹುತೇಕ ಸಣ್ಣ ಹಾಗೂ ಮಧ್ಯಮ ಗಾತ್ರದವು. ಹಾಗಾಗಿ ಈ ದೊಡ್ಡ ಗಾತ್ರದ ಬೀಜದ ತಳಿಗಳು ಒಣಭೂಮಿ ಕೃಷಿಯಲ್ಲಿ ಹೊಸ ಭರವಸೆ ಹುಟ್ಟಿಸಬಲ್ಲವು ಎಂದು ಪ್ರಕಟಣೆ ತಿಳಿಸಿದೆ.
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿಕರ ಪರವಾದ ಬರಹಗಾರರ ಮುಂದಿರುವ ಸವಾಲುಗಳು
May 8, 2025
7:21 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ 13 ರಿಂದ 25 ರವರೆಗೆ ಈ ರಾಶಿಗಳಿಗೆ ಅದೃಷ್ಟ!, ಕೆಲವು ರಾಶಿಗಳಿಗೆ ಕಠಿಣ ಕಾಲ
May 8, 2025
6:54 AM
by: ದ ರೂರಲ್ ಮಿರರ್.ಕಾಂ
ಅಪರೇಷನ್ ಸಿಂಧೂರ | ಭಾರತೀಯ ಸೇನೆಯ ಕಾರ್ಯಾಚರಣೆಗೆ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ
May 7, 2025
10:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 07-05-2025 | ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆ | ಮೇ 11 ರಿಂದ ಮಳೆ ಪುನರಾರಂಭಗೊಳ್ಳುವ ಲಕ್ಷಣ
May 7, 2025
2:42 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group