Advertisement
ರಾಷ್ಟ್ರೀಯ

ಉಕ್ರೇನ್ ಹಾಗೂ ರಷ್ಯಾ​ ಅಧ್ಯಕ್ಷರ ಜತೆ ಇಂದು ಪ್ರಧಾನಿ ನರೇಂದ್ರ ಮೋದಿ ಮಾತುಕತೆ |

Share

ಯುದ್ಧ ಪೀಡಿತ ಉಕ್ರೇನ್​ ದೇಶದ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರೊಂದಿಗೆ ಹಾಗೂ ರಷ್ಯಾ ಅಧ್ಯಕ್ಷ ರಷ್ಯಾ ಅಧ್ಯಕ್ಷ ವ್ಲಾದಿಮಿರ್​ ಪುಟಿನ್​ರೊಂದಿಗೆ  ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಯುದ್ಧ ಆರಂಭವಾದ ಬಳಿಕ ಇಂದು ಎರಡನೇ ಬಾರಿಗೆ ಉಕ್ರೇನ್​ ಅಧ್ಯಕ್ಷರೊಂದಿಗೆ ದೂರವಾಣಿ ಮೂಲಕ ಪ್ರಧಾನಿ ಮಾತನಾಡಲಿದ್ದಾರೆ.

ರಷ್ಯಾ ಯುದ್ಧ ಸಾರಿರುವುದರಿಂದ ಉಕ್ರೇನ್​ ನಲುಗಿದೆ. ಇದರಿಂದ ಉಕ್ರೇನ್​ನಲ್ಲಿ ಭಾರತೀಯರು ಸಿಲುಕಿದ್ದು, ಈಗಾಗಲೇ ಬಹುಪಾಲು ವಿದ್ಯಾರ್ಥಿಗಳನ್ನು ಭಾರತಕ್ಕೆ ಸ್ಥಳಾಂತರ ಮಾಡಲಾಗಿದೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಉಕ್ರೇನ್​ ಅಧ್ಯಕ್ಷ ಝೆಲೆನ್ಸ್ಕಿ ಜತೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಉಕ್ರೇನ್​ ಮೇಲೆ ಫೆ.24ರಿಂದ ರಷ್ಯಾ ದಾಳಿ ನಡೆಸುತ್ತಿದೆ. ಫೆ.26ರಂದು ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ನಡುವೆ ಚರ್ಚೆ ನಡೆದಿತ್ತು. ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ರಷ್ಯಾ ವಿರುದ್ಧ ನಿರ್ಣಯಕ್ಕೆ ಮತಹಾಕಲು ಭಾರತ ಒಪ್ಪಿರಲಿಲ್ಲ. ಅಂದರೆ ಪರ ಅಥವಾ ವಿರೋಧವಾಗಿ ಮತದಾನ ಮಾಡದೆ ತಟಸ್ಥ ನೀತಿ ಕಾಯ್ದುಕೊಂಡಿತ್ತು. ಇದಾದ ಬಳಿಕ ಝೆಲೆನ್ಸ್ಕಿಯವರು ಪ್ರಧಾನಿ ಮೋದಿಯವರೊಂದಿಗೆ ಮಾತನಾಡಿ, ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತ ಉಕ್ರೇನ್​ಗೇ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದರು. ಇದೀಗ ಮತ್ತೆ ರಷ್ಯಾ ಹಾಗೂ ಉಕ್ರೇನ್‌ ಅಧ್ಯಕ್ಷರ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

4 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

4 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

4 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

4 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

19 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

24 hours ago