ಕೊರೋನಾ ನಿಯಂತ್ರಣ | ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ | ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸಲು ಸೂಚನೆ |

April 27, 2022
3:14 PM

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು. ಬಳಿಕ ಮಾತನಾಡಿ  ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆಗೆ ವೇಗ ನೀಡುವಂತೆ ಕರೆ ನೀಡಿದರು. ಸಣ್ಣ ಮಕ್ಕಳು ಸೇರಿದಂತೆ ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸುವಂತೆ ಸೂಚನೆ ನೀಡಿದರು.

Advertisement
Advertisement
Advertisement
Advertisement

ಕೊರೋನಾ ವೈರಸ್ ದೂರ ಹೋಗಿದೆ ಎನ್ನುವ ಮನೋಭಾವವನ್ನು ಜನರು ಬಿಡಬೇಕು. ಭಾರತದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಉಪ ಪ್ರಬೇಧವು ಹೊಸ ಸವಾಲನ್ನು ತಂದೊಡ್ಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋವಿಡ್ ಸವಾಲು ಇನ್ನೂ ಮೀರಿಲ್ಲ ಎಂದು ಎಚ್ಚರಿಸಿದ್ದಾರೆ. ಇತರ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದರೂ, ನಾವು ಈಗ ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ನಾವು ಜಾಗರೂಕರಾಗಿರಬೇಕು ಎಂದು ಮೋದಿ ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-ಸೂಕ್ತ ನಿಯಂತ್ರಣಾ ಕ್ರಮಗಳನ್ನು  ಹಾಗೂ ಅಗತ್ಯವನ್ನು ತಿಳಿಸಬೇಕಾಗಿದೆ ಎಂದರು. ಕೋವಿಡ್ ನಿಯಮಗಳನ್ನು ದೇಶಾದ್ಯಂತ ಜನತೆ ಕಡ್ಡಾಯವಾಗಿ ಪಾಲನೆ ಮಾಡಬೇಕುಕ ಎಂದು ಮನವಿ ಮಾಡಿದರು. ಸರ್ಕಾರಗಳು  ಕೋವಿಡ್ ಟೆಸ್ಟಿಂಗ್, ಟ್ರ್ಯಾಕಿಂಗ್ ಹಾಗೂ ಟ್ರೀಟ್‌ಮೆಂಟ್‌ಗೆ ಹೆಚ್ಚಿನ ಒತ್ತು ನೀಡುವಂತೆ ಪ್ರಧಾನಿ ಮೋದಿ ಸಲಹೆ ನೀಡಿದರು.

Advertisement

ಸಭೆಯಲ್ಲಿ  ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಪರಿಶೀಲನಾ ಸಭೆಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಛತ್ತೀಸ್‌ಗಢದ ಭೂಪೇಶ್ ಬಘೇಲ್ ಮತ್ತು ಪಂಜಾಬ್‌ನ ಭಗವಂತ್ ಮಾನ್ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.

ಭಾರತವು 2,927 ಹೊಸ ಕೊರೋನಾ ವೈರಸ್ ಪ್ರಕರಣ ವರದಿಯಾಗಿದೆ.  ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 15,636 ರಿಂದ 16,279 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶವು 32 ಸಾವುಗಳ ವರದಿ ಮಾಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |
February 24, 2025
12:04 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror