ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಿದರು. ಬಳಿಕ ಮಾತನಾಡಿ ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕೆ ಲಸಿಕೆ ವಿತರಣೆಗೆ ವೇಗ ನೀಡುವಂತೆ ಕರೆ ನೀಡಿದರು. ಸಣ್ಣ ಮಕ್ಕಳು ಸೇರಿದಂತೆ ಎಲ್ಲರಿಗೂ ಲಸಿಕೆ ನೀಡುವತ್ತ ಗಮನ ಹರಿಸುವಂತೆ ಸೂಚನೆ ನೀಡಿದರು.
ಕೊರೋನಾ ವೈರಸ್ ದೂರ ಹೋಗಿದೆ ಎನ್ನುವ ಮನೋಭಾವವನ್ನು ಜನರು ಬಿಡಬೇಕು. ಭಾರತದಲ್ಲಿ ಕಾಣಿಸಿಕೊಂಡಿರುವ ಓಮಿಕ್ರಾನ್ ಉಪ ಪ್ರಬೇಧವು ಹೊಸ ಸವಾಲನ್ನು ತಂದೊಡ್ಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಕೋವಿಡ್ ಸವಾಲು ಇನ್ನೂ ಮೀರಿಲ್ಲ ಎಂದು ಎಚ್ಚರಿಸಿದ್ದಾರೆ. ಇತರ ದೇಶಗಳಿಗೆ ಹೋಲಿಸಿದರೆ ಕೋವಿಡ್ ಬಿಕ್ಕಟ್ಟನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದರೂ, ನಾವು ಈಗ ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ಏರಿಕೆ ಕಾಣುತ್ತಿದೆ. ನಾವು ಜಾಗರೂಕರಾಗಿರಬೇಕು ಎಂದು ಮೋದಿ ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್-ಸೂಕ್ತ ನಿಯಂತ್ರಣಾ ಕ್ರಮಗಳನ್ನು ಹಾಗೂ ಅಗತ್ಯವನ್ನು ತಿಳಿಸಬೇಕಾಗಿದೆ ಎಂದರು. ಕೋವಿಡ್ ನಿಯಮಗಳನ್ನು ದೇಶಾದ್ಯಂತ ಜನತೆ ಕಡ್ಡಾಯವಾಗಿ ಪಾಲನೆ ಮಾಡಬೇಕುಕ ಎಂದು ಮನವಿ ಮಾಡಿದರು. ಸರ್ಕಾರಗಳು ಕೋವಿಡ್ ಟೆಸ್ಟಿಂಗ್, ಟ್ರ್ಯಾಕಿಂಗ್ ಹಾಗೂ ಟ್ರೀಟ್‌ಮೆಂಟ್‌ಗೆ ಹೆಚ್ಚಿನ ಒತ್ತು ನೀಡುವಂತೆ ಪ್ರಧಾನಿ ಮೋದಿ ಸಲಹೆ ನೀಡಿದರು.
ಸಭೆಯಲ್ಲಿ ಪ್ರಧಾನ ಮಂತ್ರಿ ಕಚೇರಿಯ ಹಿರಿಯ ಅಧಿಕಾರಿಗಳಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಆಯಾ ಸಚಿವಾಲಯಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಪರಿಶೀಲನಾ ಸಭೆಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಛತ್ತೀಸ್‌ಗಢದ ಭೂಪೇಶ್ ಬಘೇಲ್ ಮತ್ತು ಪಂಜಾಬ್‌ನ ಭಗವಂತ್ ಮಾನ್ ಸೇರಿದಂತೆ ಹಲವು ಮುಖ್ಯಮಂತ್ರಿಗಳು ಭಾಗವಹಿಸಿದ್ದರು.
ಭಾರತವು 2,927 ಹೊಸ ಕೊರೋನಾ ವೈರಸ್ ಪ್ರಕರಣ ವರದಿಯಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ. ಭಾರತದಲ್ಲಿ ಸಕ್ರಿಯ ಪ್ರಕರಣಗಳು 15,636 ರಿಂದ 16,279 ಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದೇಶವು 32 ಸಾವುಗಳ ವರದಿ ಮಾಡಿದೆ.
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…
ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490