ಕಾಂಗ್ರೆಸ್ ಪಕ್ಷಕ್ಕೆ ಹೈಜಂಪ್ ಮಾಡಿದ ನಂತರವೂ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ತೆಗೆದಿಲ್ಲ, ಹಾಗೆ ಮಾಡುವುದು ನನ್ನ ಸಂಸ್ಕೃತಿ ಅಲ್ಲ, ನನ್ನ ಜಾಯಮಾನಕ್ಕೆ ಬಂದಿಲ್ಲ ಎಂದು ಕಾಂಗ್ರೆಸ್ ಪಕ್ಷದ ಹಾಲಿ ಹಿರಿಯ ನಾಯಕ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ದಶಕಗಳಿಂದಲೂ ತಾನು ಸೇವೆ ಸಲ್ಲಿಸಿದ ಭಾರತೀಯ ಜನತಾ ಪಕ್ಷವು ಹಾಲಿ ಅಸೆಂಬ್ಲಿ ಚುನಾವಣೆ ಹಿನ್ನೆಲೆಯಲ್ಲಿ ತನ್ನ ಸ್ವಕ್ಷೇತ್ರವಾದ ಹುಬ್ಬಳ್ಳಿ ಧಾರವಾಢ ಸೆಂಟ್ರಲ್ ಟಿಕೆಟ್ ನಿರಾಕರಿಸಿದ ನಂತರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ತಮ್ಮ ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ. ಆದರೆ ಇನ್ನೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರುಗಳ ಫೋಟೋಗಳು ಕಚೇರಿಯ ಗೋಡೆಯ ಮೇಲೆ ರಾರಾಜಿಸುತ್ತಿವೆ. ಈ ವಿಚಾರ ಈಗ ಕರ್ನಾಟಕ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸ್ವಾಭಾವಿಕವಾಗಿ, ಪಕ್ಷವು ಬದಲಾಗುತ್ತಿದ್ದಂತೆ, ಕಚೇರಿಯಲ್ಲಿ ಹೆಗ್ಗುರುತುಗಳಾಗಿ ರಾರಾಜಿಸುವ ಫೋಟೋಗಳನ್ನು ಕಿತ್ತೊಗೆದು, ತಮ್ಮ ರಾಜಕೀಯ ನಿಲುವಿಗೆ ಒಗ್ಗುವಂತಹ ಹಾಲಿ ಪಕ್ಷದ ಫೋಟೋಗಳನ್ನು ಹಾಕುವುದು ವಾಡಿಕೆಯಾಗಿದೆ. ಈಗಿಂದೀಗಲೇ ನಾನು ನನ್ನ ಹೊಸ ಪಕ್ಷದ ನಾಯಕರ ಭಾವಚಿತ್ರಗಳನ್ನು ನನ್ನ ಕಚೇರಿಯಲ್ಲಿ ನೇತು ಹಾಕಬಹುದು. ಆದರೆ ಅದು ನನಗೆ ಇಷ್ಟವಿಲ್ಲ. ಅದು ನನ್ನ ವ್ಯಕ್ತಿತ್ವವೂ ಅಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್ ಅವರು 1994 ರಿಂದ ಬಿಜೆಪಿ ಸದಸ್ಯರಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿ ಜೊತೆಗಿನ ದೀರ್ಘಕಾಲದ ನಂಟು ಮುರಿದುಕೊಂಡಿರುವ ಶೆಟ್ಟರ್ ಈಗ ಕಾಂಗ್ರೆಸ್ ಧ್ವಜ ಹಿಡಿದು ಆ ಪಕ್ಷದ ಕಾರ್ಯಕರ್ತರೊಂದಿಗೆ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ತಮ್ಮ ಹಿಂದಿನದನ್ನು ಬದಿಗಿಟ್ಟು, ಶೆಟ್ಟರ್ ತಮ್ಮ ಗೃಹ ಕಚೇರಿಯಲ್ಲಿ ಸೋಫಾದಲ್ಲಿ ಕುಳಿತು ತನ್ನ ಬೆಂಬಲಿಗರು ಮತ್ತು ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಎರಡು ಫೋಟೋ ಫ್ರೇಮ್ಗಳು ಅವರು ಕುಳಿತುಕೊಳ್ಳುವ ಹಿಂದಿನ ಗೋಡೆಯ ಮೇಲೆ ಇನ್ನೂ ನೇತಾಡುತ್ತಿವೆ. ಅದೇ ಸೋಫಾದಲ್ಲಿ ಕುಳಿತು ಮಾಧ್ಯಮಗಳಿಗೂ ಸಂದರ್ಶನ ನೀಡುತ್ತಾರೆ. ಜನರನ್ನು ಭೇಟಿ ಮಾಡುತ್ತಿದ್ದಾರೆ.
ಇನ್ನು ಈ ಫೋಟೋಗಳ ಬಗ್ಗೆ ಪ್ರಶ್ನಿಸಿದಾಗ ತಮ್ಮದೇ ಆದ ರೀತಿಯಲ್ಲಿ ಉತ್ತರಿಸಿದ್ದಾರೆ ಜಗದೀಶ್ ಶೆಟ್ಟರ್. ಪ್ರಧಾನಿ ನರೇಂದ್ರ ಮೋದಿಯವರಿಗೆ ಗೌರವ ಸೂಚಿಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಬದಲಾದ ತಕ್ಷಣ ಹಿಂದಿನ ನಾಯಕರ ಚಿತ್ರಗಳನ್ನು ತೆಗೆಯುವುದು ಒಳ್ಳೆಯ ಸಂಪ್ರದಾಯವಲ್ಲ. ನಾನು ಅದನ್ನು ಮಾಡಲು ಸಾಧ್ಯವಿಲ್ಲ. ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಬಗ್ಗೆ ಅಪಾರ ಗೌರವ ಹೊಂದಿದ್ದೇವೆ ಎಂದು ಈ ಹಿಂದೆಯೂ ಸಾಕಷ್ಟು ಬಾರಿ ಹೇಳಿದ್ದೇನೆ. ಈ ಚುನಾವಣೆ ನನ್ನ ಸ್ವಾಭಿಮಾನದ ಹೋರಾಟವೇ ಹೊರತು ರಾಜಕೀಯ ಆಕಾಂಕ್ಷೆಗಾಗಿ ಅಲ್ಲ ಎಂದು ಸೂಕ್ಷ್ಮವಾಗಿ ಹೇಳಿದರು. ನನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯಿತು. ಹಾಗಾಗಿ ಬೇಷರತ್ತಾಗಿ ಕಾಂಗ್ರೆಸ್ ಸೇರಿದ್ದೇನೆ ಎಂದು ಹೇಳಿದರು.
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…
ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…
ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…
ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…
ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…