ಮಳೆ ನೀರನ್ನು ಸಂರಕ್ಷಿಸುವ ಮೂಲಕ ನಾವು ಬಹಳಷ್ಟು ನೀರನ್ನು ವ್ಯರ್ಥವಾಗುವುದನ್ನು ತಪ್ಪಿಸಬಹುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಕಾರ್ಯಕ್ರಮದದಲ್ಲಿ ತಿಳಿಸಿದ್ದಾರೆ. ಇದೇ ವೇಳೆ ಗದಗ ಜಿಲ್ಲೆಯ ಗ್ರಾಮಸ್ಥರ ನೀರು ಸಂರಕ್ಷಣೆ ಕುರಿತ ಕ್ರಮದ ಕುರಿತು ಉಲ್ಲೇಖಿಸಿದರು. ……..ಮುಂದೆ ಓದಿ…..
ದೇಶದ ಹಲವು ಭಾಗಗಳಲ್ಲಿ ನೀರಿನ ಸಂರಕ್ಷಣೆಗಾಗಿ ಅಭೂತಪೂರ್ವ ಕೆಲಸ ಮಾಡಲಾಗಿದೆ. ಕಳೆದ 8 ವರ್ಷಗಳಲ್ಲಿ 11 ಶತಕೋಟಿ ಘನ ಮೀಟರ್ ಮತ್ತು ಅದಕ್ಕಿಂತ ಹೆಚ್ಚಿನದನ್ನು ಹೊಸದಾಗಿ ನಿರ್ಮಿಸಲಾದ ಟ್ಯಾಂಕ್‌ಗಳು, ಕೊಳಗಳು ಮತ್ತು ಇತರ ನೀರಿನ ಪುನರ್ ಭರ್ತಿ ರಚನೆಗಳ ಮೂಲಕ ನೀರನ್ನು ಸಂರಕ್ಷಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯದ ಗದಗ ಜಿಲ್ಲೆಯ ಜನರು ರೂಪಿಸಿರುವ ಒಂದು ಮಾದರಿ ಕುರಿತು ಮಾಹಿತಿ ಹಂಚಿಕೊಂಡ ಪ್ರಧಾನಿ, ಕೆಲವು ವರ್ಷಗಳ ಹಿಂದೆ, ಇಲ್ಲಿನ ಎರಡು ಹಳ್ಳಿಗಳ ಕೆರೆಗಳು ಸಂಪೂರ್ಣವಾಗಿ ಬತ್ತಿಹೋಗಿದ್ದವು. ಪ್ರಾಣಿಗಳಿಗೂ ಕುಡಿಯಲು ನೀರು ಇಲ್ಲದಂತಾಗಿತ್ತು. ಕ್ರಮೇಣ ಆ ಕೆರೆ, ಹುಲ್ಲು ಮತ್ತು ಕಸಕಡ್ಡಿಗಳಿಂದ ತುಂಬಿಹೋಯಿತು. ಆದರೆ ಕೆಲವು ಗ್ರಾಮಸ್ಥರು, ಮನಸ್ಸಿದ್ದಲ್ಲಿ ಮಾರ್ಗ ಎಂಬ ಮಾತಿನಂತೆ ಕೆರೆ ಪುನರುಜ್ಜೀವನಗೊಳಿಸಲು ನಿರ್ಧರಿಸಿ, ಕಾರ್ಯ ಪ್ರವೃತ್ತರಾದರು. ಗ್ರಾಮಸ್ಥರ ಈ ಪ್ರಯತ್ನವನ್ನು ನೋಡಿ, ಸುತ್ತಮುತ್ತಲ ಸಾಮಾಜಿಕ ಸಂಸ್ಥೆಗಳು ಸಹ ಅವರೊಂದಿಗೆ ಕೈಜೋಡಿಸಿದವು. ಎಲ್ಲರೂ ಒಗ್ಗೂಡಿ ಕಸಕಡ್ಡಿ ಸ್ವಚ್ಛಗೊಳಿಸಿ, ಹೂಳೆತ್ತುವ ಕೆಲಸ ಮಾಡಿದರು. ಕೆಲ ಸಮಯದ ನಂತರ ಕೆರೆ ಪ್ರದೇಶವು ಪುನರುಜ್ಜೀನಗೊಂಡಿತು ಎಂದು ಶ್ಲಾಘಿಸಿದರು. ನಿಜಕ್ಕೂ, ಇದು `catch the rain’ ಅಭಿಯಾನದ ಒಂದು ಉತ್ತಮ ಉದಾಹರಣೆಯಾಗಿದೆ. ಸಮುದಾಯ ಮಟ್ಟದಲ್ಲಿ ಇಂತಹ ಪ್ರಯತ್ನಗಳಿಗೆ ಎಲ್ಲರೂ ಕೈಜೋಡಿಸಬಹುದು. ನಿಮ್ಮ ಮನೆಯ ಛಾವಣಿ ಅಥವಾ ಅಂಗಳದಲ್ಲಿ ಪಕ್ಷಿಗಳಿಗೆ ನೀರನ್ನು ಇರಿಸಿ ಎಂದು ಅವರು ಸಲಹೆ ನೀಡಿದರು.
ಹೆಚ್ಚುತ್ತಿರುವ ತಾಪಮಾನದ ಕಾರಣದಿಂದ 2030 ರ ವೇಳೆಗೆ ಭಾರತವು ತನ್ನ ಒಟ್ಟು ದೇಶೀಯ…
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…