ಪಿಎಂಶ್ರೀ ಯೋಜನೆ | ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಸರ್ಕಾರಿ ಶಾಲೆಯಲ್ಲಿ |

November 8, 2024
10:12 AM
ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಪಿಎಂಶ್ರೀ ಯೋಜನೆಯ ಉದ್ದೇಶವಾಗಿದೆ.

ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾದ ಸೇವೆ ನೀಡುವ  ಯೋಜನೆಗಳಲ್ಲೊಂದಾದ ಪಿಎಂಶ್ರೀ ಯೋಜನೆಯು ಶಾಲಾ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪೂರಕವಾಗಿದೆ. ಈ ಯೋಜನೆಯನ್ನು ಬಳಸಿಕೊಂಡು ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.  …..ಮುಂದೆ ಓದಿ….

Advertisement

ಶಾಲಾ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸಿ ಮಾದರಿ ಶಾಲೆಗಳನ್ನಾಗಿ ರೂಪುಗೊಳಿಸುವಲ್ಲಿ ಕೇಂದ್ರ ಸರಕಾರದ ಪಿಎಂಶ್ರೀ ಯೋಜನೆ ಸಹಕಾರಿಯಾಗಿದೆ. ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.

ಈ ಯೋಜನೆ ಮೂಲಕ ತೆಕ್ಕಟ್ಟೆ ಗ್ರಾಮದ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ ಶಾಲೆಯೆಂದೇ ಗುರುತಿಸಿಕೊಂಡಿದೆ.  130 ಸುದೀರ್ಘ ಇತಿಹಾಸವಿರುವ ಈ ಜ್ಞಾನದೇಗುಲದಲ್ಲಿ 28 ಶಿಕ್ಷಕರಿದ್ದು, 675ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.

ಶಾಲೆಯಲ್ಲಿ ವಿವಿಧ ಬಗೆಯ ಸಸ್ಯಗಳ ಕೈತೋಟ ರಚನೆ,  ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ, ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಿಟ್ ಮೂಲಕ ಮಕ್ಕಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಪ್ರಯೋಗಾಲಯ ಹಾಗೂ ತಂತ್ರಜ್ಞಾನ ಆಧರಿತ ಸ್ಟ್ರಾರ್ಟ್ ಕ್ಲಾಸ್‌ಗಳ ಮೂಲಕ ಪರಿಣಾಮಕಾರಿಯಾಗಿ ಕಲಿಕಾ ಪಾಠಗಳು ಅರ್ಥವಾಗುವಂತೆ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ.

ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಲ್ಯಾಬ್ ಹಾಗೂ 5 ಸಾವಿರಕ್ಕೂ ಹೆಚ್ಚು ಪುಸ್ತಕಗಳ ವಾಚನಾಲಯ ಇದ್ದು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧರಿತ ನಾವೀನ್ಯ ಬೋಧನಾ ವ್ಯವಸ್ಥೆ ಮಾಡಲಾಗಿದೆ. ಇವೆಲ್ಲವನ್ನೂ ಬಳಸಿಕೊಂಡು ಶಾಲೆಯು  “ಉತ್ತಮ ಶಾಲೆ ರಾಜ್ಯ ಪ್ರಶಸ್ತಿ”, ಉತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿ , ಉತ್ತಮ ನಲಿಕಲಿ ಪ್ರಶಸ್ತಿ, ಪರಿಸರ ಮಿತ್ರ ಪ್ರಶಸ್ತಿಗಳನ್ನು ಗಳಿಸಿದೆ.

ಪಿಎಂಶ್ರೀ ಯೋಜನೆಯಿಂದ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಉತ್ತಮ ತಾಂತ್ರಿಕ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವುದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದೆ.

ಶಾಲೆಗೆ 130 ವರ್ಷಗಳ ಇತಿಹಾಸವಿದ್ದು, ಪಿಎಂಶ್ರೀ ಯೋಜನೆಯಿಂದ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಹೆಚ್ಚಾಗಿದ್ದಾರೆ. ಸಿರಿಧಾನ್ಯ, ವೈದ್ಯಕೀಯ ತಪಾಸಣೆ, ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿಯೊಂದಿಗೆ ಹೊಸ ತಂತ್ರಜ್ಞಾನದ ಅಳವಡಿಸಿರುವುದರಿಂದ ಶಾಲೆಯು ಶೈಕ್ಷಣಿಕವಾಗಿ ಜಿಲ್ಲೆಯಲ್ಲಿ ಉತ್ತಮ ಶಾಲೆ ಎಂದು ಗುರುತಿಸಿಕೊಂಡಿದೆ ಎಂದು ಶಾಲಾಮುಖ್ಯ ಶಿಕ್ಷಕರಾದ ಲಲಿತಾ ಸಖಾರಾಮ್ ಹೇಳುತ್ತಾರೆ.

ಕೇಂದ್ರ ಸರಕಾರದ ಪಿಎಂಶ್ರೀ ಯೋಜನೆ ಗ್ರಾಮೀಣ ಭಾಗದ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಹಕಾರಿಯಾಗಿದೆ ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ ದೇವಾಡಿಗ ಹೇಳುತ್ತಾರೆ.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ
ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ
April 1, 2025
9:28 PM
by: The Rural Mirror ಸುದ್ದಿಜಾಲ
ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |
April 1, 2025
8:46 PM
by: The Rural Mirror ಸುದ್ದಿಜಾಲ
15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ
April 1, 2025
8:20 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group