ಶಿಕ್ಷಣ ಕ್ಷೇತ್ರದಲ್ಲಿ ಉತ್ತಮವಾದ ಸೇವೆ ನೀಡುವ ಯೋಜನೆಗಳಲ್ಲೊಂದಾದ ಪಿಎಂಶ್ರೀ ಯೋಜನೆಯು ಶಾಲಾ ಗುಣಮಟ್ಟವನ್ನು ಹೆಚ್ಚಿಸುವಲ್ಲಿ ಪೂರಕವಾಗಿದೆ. ಈ ಯೋಜನೆಯನ್ನು ಬಳಸಿಕೊಂಡು ಉಡುಪಿ ಜಿಲ್ಲೆಯ ತೆಕ್ಕಟ್ಟೆಯ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯು ಜಿಲ್ಲೆಯಲ್ಲಿಯೇ ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ. …..ಮುಂದೆ ಓದಿ….
ಶಾಲಾ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸಿ ಮಾದರಿ ಶಾಲೆಗಳನ್ನಾಗಿ ರೂಪುಗೊಳಿಸುವಲ್ಲಿ ಕೇಂದ್ರ ಸರಕಾರದ ಪಿಎಂಶ್ರೀ ಯೋಜನೆ ಸಹಕಾರಿಯಾಗಿದೆ. ದೇಶಾದ್ಯಂತ 14500 ಶಾಲೆಗಳನ್ನು ಅಧುನಿಕ ಸೌಕರ್ಯ ಮತ್ತು ಉತ್ತಮ ಪಠ್ಯಕ್ರಮ ಹಾಗೂ ಶಿಕ್ಷಣಕ್ಕೆ ಅಗತ್ಯವಿರುವ ನೂತನ ತಂತಜ್ಞಾನ ಹಾಗೂ ಸಲಕರಣೆಗಳನ್ನು ನೀಡುವುದು ಈ ಯೋಜನೆಯ ಉದ್ದೇಶವಾಗಿದೆ.
ಈ ಯೋಜನೆ ಮೂಲಕ ತೆಕ್ಕಟ್ಟೆ ಗ್ರಾಮದ ಕುವೆಂಪು ಶತಮಾನೋತ್ಸವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ದಾಖಲಾಗಿರುವ ಶಾಲೆಯೆಂದೇ ಗುರುತಿಸಿಕೊಂಡಿದೆ. 130 ಸುದೀರ್ಘ ಇತಿಹಾಸವಿರುವ ಈ ಜ್ಞಾನದೇಗುಲದಲ್ಲಿ 28 ಶಿಕ್ಷಕರಿದ್ದು, 675ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ.
ಶಾಲೆಯಲ್ಲಿ ವಿವಿಧ ಬಗೆಯ ಸಸ್ಯಗಳ ಕೈತೋಟ ರಚನೆ, ಹೆಣ್ಣು ಮಕ್ಕಳಿಗೆ ಕರಾಟೆ ತರಬೇತಿ, ವಿಜ್ಞಾನ ಹಾಗೂ ಗಣಿತಕ್ಕೆ ಸಂಬಂಧಿಸಿದ ಕಿಟ್ ಮೂಲಕ ಮಕ್ಕಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಸುಸಜ್ಜಿತ ಪ್ರಯೋಗಾಲಯ ಹಾಗೂ ತಂತ್ರಜ್ಞಾನ ಆಧರಿತ ಸ್ಟ್ರಾರ್ಟ್ ಕ್ಲಾಸ್‌ಗಳ ಮೂಲಕ ಪರಿಣಾಮಕಾರಿಯಾಗಿ ಕಲಿಕಾ ಪಾಠಗಳು ಅರ್ಥವಾಗುವಂತೆ ವಿದ್ಯಾರ್ಥಿಗಳಿಗೆ ಬೋಧಿಸಲಾಗುತ್ತಿದೆ.
ಕಂಪ್ಯೂಟರ್ ಲ್ಯಾಬ್, ವಿಜ್ಞಾನ ಲ್ಯಾಬ್ ಹಾಗೂ 5 ಸಾವಿರಕ್ಕೂ ಹೆಚ್ಚು ಪುಸ್ತಕಗಳ ವಾಚನಾಲಯ ಇದ್ದು ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಆಧರಿತ ನಾವೀನ್ಯ ಬೋಧನಾ ವ್ಯವಸ್ಥೆ ಮಾಡಲಾಗಿದೆ. ಇವೆಲ್ಲವನ್ನೂ ಬಳಸಿಕೊಂಡು ಶಾಲೆಯು “ಉತ್ತಮ ಶಾಲೆ ರಾಜ್ಯ ಪ್ರಶಸ್ತಿ”, ಉತ್ತಮ ಎಸ್.ಡಿ.ಎಂ.ಸಿ. ಪ್ರಶಸ್ತಿ , ಉತ್ತಮ ನಲಿಕಲಿ ಪ್ರಶಸ್ತಿ, ಪರಿಸರ ಮಿತ್ರ ಪ್ರಶಸ್ತಿಗಳನ್ನು ಗಳಿಸಿದೆ.
ಪಿಎಂಶ್ರೀ ಯೋಜನೆಯಿಂದ ಗ್ರಾಮೀಣ ಭಾಗದ ಸರಕಾರಿ ಶಾಲೆಗಳಲ್ಲಿ ಉತ್ತಮ ತಾಂತ್ರಿಕ ಶಿಕ್ಷಣ ಹಾಗೂ ಮೂಲಸೌಕರ್ಯಗಳನ್ನು ಒದಗಿಸುವುದರೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸಹಕಾರಿಯಾಗಿದೆ.
15.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ : ಕಾಸರಗೋಡು…
ತೆಂಗಿನ ಕಾಯಿ ಧಾರಣೆ ಈಗ ಮತ್ತೆ 50 ರೂಪಾಯಿಗೆ ಏರಿಕೆಯಾಗಿದೆ.
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹತ್ತಿ ಉತ್ಪನ್ನ ಖರೀದಿಸಲು ಯಾದಗಿರಿ…
ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು…
ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಬಡ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಒದಗಿಸಲು ಗ್ರಾಮಸ್ಥರ…
ಭಾರತೀಯ ದೂರಸಂಪರ್ಕ ಇಲಾಖೆ (BSNL) ಭಾರತದ ಮೊದಲ ಉಪಗ್ರಹದಿಂದ ಸಂಪರ್ಕ ಸಾಧನದ ಸೇವೆಯನ್ನು…